ಜವಳಿ ಇಲಾಖೆಯಲ್ಲಿ 12 ಲಕ್ಷ ಉದ್ಯೋಗ ಸೃಷ್ಟಿ: ಸಚಿವ ಮುನೇನಕೊಪ್ಪ

By Kannadaprabha NewsFirst Published Oct 29, 2021, 1:38 PM IST
Highlights

*   ಕೈಮಗ್ಗ, ಜವಳಿ ಇಲಾಖೆಗೆ 10 ಸಾವಿರ ಕೋಟಿ 
*   ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮೆಗಾ ಟೆಕ್ಸ್‌ಟೈಲ್‌ ಪಾರ್ಕ್ ಆರಂಭಕ್ಕೆ ಚಿಂತನೆ 
*   ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ 20ರಿಂದ 30 ಯೋಜನೆಗಳು 
 

ಬಳ್ಳಾರಿ(ಅ.29): ಜವಳಿ ಇಲಾಖೆಯಲ್ಲಿ 12 ಲಕ್ಷ ಜನರಿಗೆ ಉದ್ಯೋಗ(Job) ಸೃಷ್ಟಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಕೈಮಗ್ಗ ಮತ್ತು ಜವಳಿ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಂಕರ ಬಿ. ಪಾಟೀಲ ಮುನೇನಕೊಪ್ಪ(Shankar Patil Munenakoppa) ಹೇಳಿದ್ದಾರೆ. 

ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಳ್ಳಾರಿ ವಿಭಾಗ (ಉತ್ತರ ವಲಯ) ಮಟ್ಟದ ಕೈಮಗ್ಗ ಮತ್ತು ಜವಳಿ ಇಲಾಖೆಯ(Department of Textiles) ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಅವರು ನ್ಯಾಷನಲ್‌ ಹ್ಯಾಂಡಲೂಮ್‌ ಡೆವಲಪ್‌ಮೆಂಟ್‌ ಪ್ರೋಗ್ರಾಂ(National Handloom Development Program) ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇದರಿಂದ ನಮ್ಮ ರಾಜ್ಯಕ್ಕೆ(Karnataka) ಉಪಯೋಗವಾಗುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದರು.

ರಾಜ್ಯದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 132 ಕೋಟಿ ಸಬ್ಸಿಡಿ ಹಣ ಅರ್ಹ ಫಲಾನುಭವಿಗಳಿಗೆ ನೀಡಿದ್ದು, ಪರಿಶಿಷ್ಟವರ್ಗಗಳ ಹೊರತುಪಡಿಸಿ 2020- 21ನೇ ಸಾಲಿನಲ್ಲಿ .121 ಕೋಟಿ ಸಾಲಮನ್ನಾ(Loan Waiver) ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮೆಗಾ ಟೆಕ್ಸ್‌ಟೈಲ್‌ ಪಾರ್ಕ್(Mega Textile Park) ಆರಂಭಕ್ಕೆ ಚಿಂತನೆ ನಡೆದಿದೆ ಎಂದರು.

ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಅನುಮತಿ : ಎಷ್ಟು ಹುದ್ದೆಗಳಿಗೆ ನೇಮಕಾತಿ?

ಜವಳಿ ಇಲಾಖೆಯು ನೇಕಾರ ಸಮುದಾಯದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿದೆ. ನ್ಯಾಷನಲ್‌ ಹ್ಯಾಂಡಲೂಮ್‌ ಡೆವಲಪ್‌ಮೆಂಟ್‌ ಪ್ರೋಗ್ರಾಂ ಎಂಬ ಮಹತ್ವಾಕಾಂಕ್ಷಿ ಯೋಜನೆ ಕೇಂದ್ರ ಸರ್ಕಾರ(Central Government) ಜಾರಿಗೆ ತಂದಿದ್ದು, ಈ ಯೋಜನೆಯ ಮೂಲಕ ಕೈಮಗ್ಗ ಮತ್ತು ಜವಳಿ ಇಲಾಖೆಗೆ .10 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಲಿದ್ದು, ಇದರಿಂದ ಇಲಾಖೆಯ ಪುನಶ್ಚೇತನವಾಗಲಿದೆ ಎಂದರು.

ಜವಳಿ ಇಲಾಖೆ ಶೇ. 90ರಷ್ಟುಸಬ್ಸಿಡಿ ನೀಡುವ ಮೂಲಕ ನೇಕಾರ ಸಮುದಾಯದ ನೆರವಿಗೆ ನಿಲ್ಲುವ ಕೆಲಸ ಮಾಡಲಾಗುತ್ತಿದೆ. ಸಮಾಜದ ಎಲ್ಲರಿಗೂ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಬ್ಸಿಡಿ ಹೆಚ್ಚಿಸಲಾಗಿದೆ. ಆಯುಷ್ಮಾನ ಯೋಜನೆಯ ಮುಖಾಂತರ ಬಿಪಿಎಲ್‌(BPL) ಪಡಿತರ ಚೀಟಿ ಹೊಂದಿದವರೆಗೆ ಉಚಿತ ಆರೋಗ್ಯ ಸೇವೆ9Free Health Service) ನಿಡಲಾಗುತ್ತದೆ. ಇದರ ಕುರಿತು ಹಲವರಿಗೆ ಮಾಹಿತಿಯ ಕೊರತೆಯಿದೆ. ಇದರ ಕುರಿತು ಅರಿವು ಮೂಡಿಸುವ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ 20ರಿಂದ 30 ಯೋಜನೆಗಳಿದ್ದು, ಅವುಗಳ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಮೂಲಕ ನೇಕಾರ ಸಮುದಾಯದ ಕಟ್ಟಕಡೆಯ ವ್ಯಕ್ತಿಯ ಜೀವನ ಸುಧಾರಣೆಗೆ ಕ್ರಮ ವಹಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಎಲ್ಲ ಕಬ್ಬು ಬೆಳೆಗಾರರಿಗೆ ಹಣ ಬಿಡುಗಡೆ ಮಾಡಲಾಗಿದೆ. ಯಾವುದೇ ಹಣ ಬಾಕಿ ಉಳಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು ಈ ಹಿಂದೆ ಬಾಕಿ ಇರುವ ಹಣದ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಗಿರೀಶ ಮೈಸೂರು, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ವಿಠ್ಠಲ್‌ರಾಜು ಮತ್ತಿತರರು ಇದ್ದರು. ನಂತರ ಸಚಿವರು ನಗರದ ಪೊಲೇಕ್ಸ್‌ ಜೀನ್ಸ್‌ ತಯಾರಿಕಾ ಘಟಕ ಮತ್ತು ವಾಶಿಂಗ್‌ ಯುನಿಟ್‌ಗೆ ಭೇಟಿ ನೀಡಿದ ಸಚಿವ ಮುನೇನಕೊಪ್ಪ ಅವರು ಪರಿಶೀಲನೆ ನಡೆಸಿ ಮಾಲೀಕರು ಹಾಗೂ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಪೊಲೆಕ್ಸ್‌ ಹನುಮಂತಪ್ಪ, ಪೊಲೇಕ್ಸ್‌ ಮಲ್ಲಿಕಾರ್ಜುನ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಗಿರೀಶ ಮೈಸೂರು, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ವಿಠ್ಠಲ್‌ರಾಜು ಮತ್ತಿತರರಿದ್ದರು.
 

click me!