ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ 22ರ ಕೊನೆಯ ದಿನವಾಗಿದೆ.
ಬೆಂಗಳೂರು(ಏ.19): ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್ (Air India Air Transport Services Limited) ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 604 ಹುದ್ದೆಗಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ 22ರ ಕೊನೆಯ ದಿನವಾಗಿದೆ. http://www.aiasl.in/Recruitment ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಅಧಿಕೃತ ವೆಬ್‌ತಾಣ http://www.aiasl.in/ ಗೆ ಭೇಟಿ ನೀಡಲು ಕೋರಲಾಗಿದೆ.
ಒಟ್ಟು 604 ಹುದ್ದೆಗಳ ಮಾಹಿತಿ ಇಂತಿದೆ
ಟರ್ಮಿನಲ್ ಮ್ಯಾನೇಜರ್ (Terminal Manager): 1 ಹುದ್ದೆ
ಡಿ. ಟರ್ಮಿನಲ್ ಮ್ಯಾನೇಜರ್-PAX: 1 ಹುದ್ದೆ
ಡ್ಯೂಟಿ ಮ್ಯಾನೇಜರ್-ಟರ್ಮಿನಲ್: 6 ಹುದ್ದೆಗಳು
ಜೂನಿಯರ್ ಕಾರ್ಯನಿರ್ವಾಹಕ ( Junior Executive ) -ಟೆಕ್ನಿಕಲ್: 5 ಹುದ್ದೆಗಳು
ರಾಂಪ್ ಸೇವಾ ಏಜೆಂಟ್ (Ramp Service Agent): 12 ಹುದ್ದೆಗಳು
ಯುಟಿಲಿಟಿ ಏಜೆಂಟ್ ಕಮ್ ರಾಂಪ್ ಡ್ರೈವರ್: 96 ಹುದ್ದೆಗಳು
ಗ್ರಾಹಕ ಏಜೆಂಟ್ (Customer Agent): 206 ಹುದ್ದೆಗಳು
ಹ್ಯಾಂಡಿಮ್ಯಾನ್ / ಹ್ಯಾಂಡಿ ಮಹಿಳೆ: 277 ಹುದ್ದೆಗಳು
Udupi Saint Mary's Island ಸೆಲ್ಫಿ ತೆಗೆಯಲು ಹೋಗಿ ಸಾವನ್ನಪ್ಪಿದ ವಿದ್ಯಾರ್ಥಿಗಳು
ಶೈಕ್ಷಣಿಕ ವಿದ್ಯಾರ್ಹತೆ: ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹುದ್ದೆಗೆ ಅನುಸಾರವಾಗಿ ಪದವಿ / ಬಿಇ / ಐಟಿಐ/ ಡಿಪ್ಲೊಮ / ಎಸ್‌ಎಸ್‌ಎಲ್‌ಸಿ ಮಾಡಿರಬೇಕು.
ವಯೋಮಿತಿ: ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ 55 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ: ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ವರ್ಗದ, ಇತರೆ ಹಿಂದುಳಿದ ಅಭ್ಯರ್ಥಿಗಳು ₹500 ಅರ್ಜಿ ಶುಲ್ಕ ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
SBI Recruitment 2022: ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ
ಆಯ್ಕೆ ಪ್ರಕ್ರಿಯೆ : ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನ ಮತ್ತು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳ ವಿವರ: ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆಧಾರ್ ಕಾರ್ಡ್, ಶೈಕ್ಷಣಿಕ ಅರ್ಹತೆ ದಾಖಲೆಗಳು, ಕಾರ್ಯಾನುಭವ ದಾಖಲೆಗಳು ಮತ್ತು ಭಾವಚಿತ್ರ ಅಗತ್ಯವಾಗಿ ಲಗತ್ತಿಸಬೇಕು.
KPSC RDWSD Recruitment 2022 ಒಟ್ಟು 136 ಕಿರಿಯ ಇಂಜಿನಿಯರ್ ಹುದ್ದೆಗೆ ನೇಮಕಾತಿ
ವೇತನ ವಿವರ: ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ದೊರೆಯಲಿದೆ.