ಸಂಸ್ಥೆಯು ಈವರೆಗೆ 20 ಉದ್ಯೋಗ ಮೇಳಗಳನ್ನು ವ್ಯವಸ್ಥಿತವಾಗಿ ನಡೆಸಿ ಕೊಂಡು ಬಂದಿದ್ದು, 55, 564 ಅಭ್ಯರ್ಥಿಗಳು ವಿವಿಧ ಕಂಪನಿಗಳಿಗೆ ಶಾರ್ಟ್‌ಲಿಸ್ಟ್ ಆಗಿದ್ದಾರೆ. ಈ ಬಾರಿ 200ಕ್ಕೂ ಅಧಿಕ ವಿವಿಧ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಈಗಾಗಲೇ 68 ಕಂಪೆನಿಗಳು ನೋಂದಾಯಿಸಿಕೊಂಡಿವೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್‌ಮೆಂಟ್ ಟ್ರಸ್ಟಿ ವಿವೇಕ್ ಆಳ್ವ
ಮಂಗಳೂರು(ಮೇ.12): ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 2007ರಿಂದ ನಡೆಸಿಕೊಂಡು ಬರುತ್ತಿರುವ 'ಆಳ್ವಾಸ್ ಪ್ರಗತಿ' ಬೃಹತ್ ಉದ್ಯೋಗ ಮೇಳ ಈ ಬಾರಿ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಜೂ.7 ಮತ್ತು 8ರಂದು ನಡೆಯ ಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್‌ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ವಿವೇಕ್ ಆಳ್ವ ಅವರು, ಸಂಸ್ಥೆಯು ಈವರೆಗೆ 20 ಉದ್ಯೋಗ ಮೇಳಗಳನ್ನು ವ್ಯವಸ್ಥಿತವಾಗಿ ನಡೆಸಿ ಕೊಂಡು ಬಂದಿದ್ದು, 55, 564 ಅಭ್ಯರ್ಥಿಗಳು ವಿವಿಧ ಕಂಪನಿಗಳಿಗೆ ಶಾರ್ಟ್‌ಲಿಸ್ಟ್ ಆಗಿದ್ದಾರೆ. ಈ ಬಾರಿ 200ಕ್ಕೂ ಅಧಿಕ ವಿವಿಧ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಈಗಾಗಲೇ 68 ಕಂಪೆನಿಗಳು ನೋಂದಾಯಿಸಿಕೊಂಡಿವೆ ಎಂದು ತಿಳಿಸಿದರು.
ಎಸ್‌ಬಿಐನಲ್ಲಿ ಐಟಿ ಮತ್ತು ಇತರ ಹುದ್ದೆಗಳಿಗೆ 12,000 ಉದ್ಯೋಗಿಗಳ ನೇಮಕ: ದಿನೇಶ್ ಖಾರಾ
ಉದ್ಯೋಗ ಮೇಳದಲ್ಲಿ ಬ್ಯಾಂಕಿಂಗ್ ಮತ್ತು ಹೆಲ್ತ್ ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋ ಮೊಬೈಲ್, ಹಾಸ್ಪಿಟಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್‌ಜಿಒಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಆಳ್ವಾಸ್ ಪ್ರಗತಿಯಲ್ಲಿ ನೇಮಕಾತಿ ನಡೆಸಲಿವೆ ಎಂದು ಮಾಹಿತಿ ನೀಡಿದರು.
ಹೊರ ಜಿಲ್ಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಜೂನ್ 6ರಿಂದ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗೆ ಮೊ. 9008907716, 9663190590, 7975223865, 9741440490 ಸಂಖ್ಯೆಗಳಿಗೆ ಕರೆ ಮಾಡಬಹುದು. ಅಭ್ಯರ್ಥಿಗಳ ನೋಂದಣಿ ಹಾಗೂ ಉದ್ಯೋಗ ನೀಡಲಿರುವ ಕಂಪನಿಗಳ ಮಾಹಿತಿಗೆ www.alvaspragati. http://www.alvaspragati.com ಪರಿಶೀಲಿಸಿ.
ಕೆಎಸ್‌ಆರ್‌ಟಿಸಿ ನೇಮಕಾತಿ ಮುಂದುವರಿಕೆ, ಮೇ 15ರಿಂದ ಆರಂಭ
ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥ ಸುಶಾಂತ್ ಅನಿಲ್ ಲೋಬೊ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಇದ್ದರು.
ಬ್ಯಾಂಕ್, ಐಟಿ ಕಂಪನಿ, ಮಷಿನರಿ ಕಂಪನಿಗಳು ಭಾಗಿ
ಎಂಬಿಎ, ಎಂಕಾಂ, ಬಿಕಾಂ, ಬಿಬಿಎ, ಬಿಎಸ್ಸಿ, ಬಿಎ, ಬಿಸಿಎ ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರಿಗೆ ಹೈದರಬಾದ್‌ನ ಫ್ಯಾಕ್‌ಟೈಟ್ ಸಂಸ್ಥೆ, ಇಎಕ್ಸ್‌ಎಲ್ ಸರ್ವಿಸ್, ಮಹೀಂದ್ರಾ ಫಿನಾನ್ಸ್, ಪ್ರತಿಷ್ಠಿತ ಬ್ಯಾಂಕ್‌ಗಳಾದ ಎಚ್‌ಡಿಎಫ್‌ಸಿ, ಆ್ಯಕ್ಸಿಸ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್, ಬಂಧನ್ ಬ್ಯಾಂಕ್ ಹಾಗೂ ಇನ್ನಿತರ ಸಂಸ್ಥೆಗಳು ಬಹುಅವಕಾಶಗಳನ್ನು ನೀಡಲಿವೆ. ಉತ್ಪಾದನಾ ವಲಯದಲ್ಲಿ ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್‌ಟೈಲ್ ಮೆಷಿನರಿ, ಉಷಾ ಆರ್ಮರ್ ಮುಂತಾದ ಕಂಪನಿಗಳು ಭಾಗವಹಿಸಲಿವೆ. ಐಟಿ ವಲಯದಲ್ಲಿ ಟಾಟಾ ಕನ್ಸಲೆನ್ಸಿ, ದಿಯಾ ಸಿಸ್ಟಮ್ಸ್, 24X7ಎಐ, ಕಾನ್ವೆಂಟ್ರಿಕ್ಸ್, ವಿನ್‌ಮ್ಯಾನ್ ಸಾಫ್ಟ್‌ವೇರ್ ಕಂಪನಿಗಳು ಯಾವುದೇ ಹಿನ್ನೆಲೆಯ ಪದವೀಧರರನ್ನು ನೇಮಿಸಿಕೊಳ್ಳಲಿವೆ.