
ಬೆಂಗಳೂರು: ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ- 1, 2(ಎ), 3(ಎ), ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದೆ.ತರಬೇತಿಗಾಗಿ ಅರ್ಹ 3ನೇ ಬ್ಯಾಚ್ ಪ್ರಾರಂಭಿಸಲು ಅಭ್ಯರ್ಥಿಗಳಿಂದ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಕರ್ನಾಟಕ ರಾಜ್ಯದ ಕಾಯಂ ನಿವಾಸಿಯಾಗಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಸೇರಿರಬೇಕು. ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ (ಪ್ರವರ್ಗ-1 ಕ್ಕೆ 2.50 ಲಕ್ಷ ರು. ಮತ್ತು ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ 10 ಲಕ್ಷ ರು.) ಯಲ್ಲಿರಬೇಕು. ಅಭ್ಯರ್ಥಿಯು 10ನೇ ತರಗತಿ ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ. 45ರಷ್ಟು ಅಂಕಗಳನ್ನು ಪಡೆದಿರಬೇಕು.
ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರುವ ಕನಿಷ್ಠ ವಿದ್ಯಾರ್ಹತೆ ಹೊಂದಿರಬೇಕು. 17 ರಿಂದ 20 ವರ್ಷದೊಳಗಿರಬೇಕು. 2025ರ ಸೆ. 1 ರಿಂದ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 2008ರ ಸೆ. 1 ರಿಂದ 2025ರ ಸೆ. 1ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. ತರಬೇತಿಯನ್ನು ಕಲಬುರಗಿ ಜಿಲ್ಲೆ (ಕೇಂದ್ರ ಸ್ಥಳ) ದಲ್ಲಿ ನೀಡಲಾಗುವುದು.
ಇದನ್ನೂ ಓದಿ: ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡ್ತಾ ನೀಟ್ ಪರೀಕ್ಷೆ ಪಾಸ್ ಮಾಡಿದ ಒಡಿಶಾದ ಶುಭಂ
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಕಲಬುರಗಿ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆ. 10 ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ಮೊ. 81050 85410, 91484 89157 ನ್ನು ಸಂಪರ್ಕಿಸಬಹುದು ಎಂದು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ಸಾಮಾನ್ಯ ರೈತನ ಮಗಳ ಅಸಾಮಾನ್ಯ ಸಾಧನೆ, ರಾಜ್ಯಕ್ಕೆ ಟಾಪರ್ ಆಗಿ ಕಲೆಕ್ಟರ್ ಆದ ಹೆಣ್ಣಮಗಳ ಕಥೆ!