ಉಚಿತ ಬ್ಯೂಟೀಷಿಯನ್ ತರಬೇತಿ: ರಾಜ್ಯದ ಯುವತಿಯರಿಗೆ ಸುವರ್ಣಾವಕಾಶ

By Sathish Kumar KH  |  First Published Sep 23, 2024, 7:00 PM IST

ಬೆಂಗಳೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಯುವತಿಯರಿಗೆ ಉಚಿತ ಬ್ಯೂಟೀಷಿಯನ್ ತರಬೇತಿ. 30 ದಿನಗಳ ವಸತಿಯುತ ತರಬೇತಿಯೊಂದಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯ. ಅರ್ಜಿ ಸಲ್ಲಿಸಲು ಅಕ್ಟೋಬರ್ 18 ಕೊನೆಯ ದಿನ.


ಬೆಂಗಳೂರು (ಸೆ.23): ಬೆಂಗಳೂರು ಸೇರಿದಂತೆ ರಾಮನಗರ ಹಾಗೂ ತುಮಕೂರು ಜಿಲ್ಲೆಯಲ್ಲಿ ನೆಲೆಸಿರುವ ಯುವತಿಯರು ಹಾಗೂ ಮಹಿಳೆಯರು ಬ್ಯೂಟೀಷಿಯನ್ ಆಗಬೇಕು ಎಂಬ ಆಸಕ್ತಿ ಇದೆಯೇ ಇಲ್ಲಿದೆ ನೋಡಿ ನಿಮಗೊಂದು ಭರ್ಜರಿ ಅವಕಾಶ. ಸರ್ಕಾರದ ವತಿಯಿಂದಲೇ ಉಚಿತ ಊಟ ಮತ್ತು ವಸತಿಯೊಂದಿಗೆ ಒಂದು ತಿಂಗಳ ಅವಧಿಯಲ್ಲಿ ಉಚಿತವಾಗಿ ಬ್ಯೂಟೀಷಿಯನ್ ತರಬೇತಿಯನ್ನು ನೀಡಲಾಗುತ್ತಿದೆ. ಅ.18ರೊಳಗೆ ಅರ್ಜಿ ಸಲ್ಲಿಸಿ ತರಬೇತಿ ಪಡೆದುಕೊಂಡು, ಉದ್ಯಮಿಗಳಾಗಿ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿಯು ನವೆಂಬರ್ 05 ರಿಂದ ಪ್ರಾರಂಭವಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಜಿಲ್ಲೆಯ ನಿವಾಸಿಗಳು ಮಾತ್ರ ಉಚಿತ ತರಬೇತಿ ಪಡೆದುಕೊಳ್ಳಲು ಅರ್ಹರಾಗಿದ್ದಾರೆ.

Latest Videos

undefined

ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ: 945 ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೇಲ್ಕಂಡ ನಾಲ್ಕು ಜಿಲ್ಲೆಗಳ ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ಗಳನ್ನು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 18 ಕೊನೆಯ ದಿನವಾಗಿದೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

click me!