
ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಸಂಸ್ಥೆಯು 83 ಎಂಜಿನಿಯರ್, ಸಹಾಯಕ ವ್ಯವಸ್ಥಾಪಕ, ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ ಹಾಗೂ ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸಂಸ್ಥೆಯ ಹೆಸರು: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 83
ಹುದ್ದೆಗಳ ಹೆಸರು: ಎಂಜಿನಿಯರ್, ಮ್ಯಾನೇಜರ್ ಹಾಗೂ ಇತರ ಹುದ್ದೆಗಳು
ಉದ್ಯೋಗ ಸ್ಥಳ: ಬೆಂಗಳೂರು -ಕರ್ನಾಟಕ
ವೇತನ: ₹40,000–₹2,60,000
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ BE/B.Tech, MBBS, MD/DNB, ME/M.Tech ಪೂರ್ಣಗೊಳಿಸಿರಬೇಕು.
ವಯೋಮಿತಿ: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 48 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ₹500
ಎಸ್‌ಸಿ,ಎಸ್‌ಟಿ/ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ: ಯಾವುದೇ ಇಲ್ಲ
ಪಾವತಿ ವಿಧಾನ: ಆನ್ಲೈನ್ ಮೂಲಕ
ಮೊದಲಿಗೆ BEML ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ವೆಬ್‌ಸೈಟ್‌ನಲ್ಲಿರುವ Careers ವಿಭಾಗವನ್ನು ತೆರೆಯಿರಿ.
KP/S/18/2026 ನೇಮಕಾತಿ ಅಧಿಸೂಚನೆಯನ್ನು ಹುಡುಕಿ.
ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ನಿಮ್ಮ ವಿದ್ಯಾರ್ಹತೆ ಮತ್ತು ಅನುಭವಕ್ಕೆ ಹೊಂದುವ ಹುದ್ದೆಯನ್ನು ಆಯ್ಕೆಮಾಡಿ.
ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಕೇಳಿರುವ ವೈಯಕ್ತಿಕ ಹಾಗೂ ಶೈಕ್ಷಣಿಕ ಮಾಹಿತಿಯನ್ನು ಭರ್ತಿ ಮಾಡಿ.
ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ಅನ್ವಯವಾಗುವ ಅರ್ಜಿ ಶುಲ್ಕವನ್ನು ಪಾವತಿಸಿ.
ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ Submit ಮಾಡಿ.
ಭವಿಷ್ಯದ ಬಳಕೆಗಾಗಿ ಅರ್ಜಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ.
ಅಧಿಸೂಚನೆ ಪ್ರಕಟವಾದ ದಿನಾಂಕ 16-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 3-2026