ಬೆಂಗಳೂರು ಜಿಲ್ಲಾಡಳಿತದಿಂದ ಕ್ಲರ್ಕ್ ಮತ್ತು ಡೆಟಾ ಎಂಟ್ರಿ ಆಪರೇಟರ್ ನೇಮಕಾತಿ

By Sathish Kumar KH  |  First Published May 8, 2024, 6:16 PM IST

ಬೆಂಗಳೂರು ನಗರ ಜಿಲ್ಲೆಯ ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ಮಾಸಿಕ ಸಂಚಿತ ಗೌರವಧನದ ಅಧಾರದ ಮೇಲೆ ಕ್ಲರ್ಕ್ ಕಂ ಅಕೌಂಟೆಂಟ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 


ಬೆಂಗಳೂರು (ಮೇ 08): ಬೆಂಗಳೂರು ನಗರ ಜಿಲ್ಲೆಯ ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ಮಾಸಿಕ ಸಂಚಿತ ಗೌರವಧನದ ಅಧಾರದ ಮೇಲೆ ಕ್ಲರ್ಕ್ ಕಂ ಅಕೌಂಟೆಂಟ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. 

ವಿದ್ಯಾರ್ಹತೆ: ಅಕೌಂಟೆಂಟ್ ಹುದ್ದೆಗೆ ಬಿ.ಕಾಂ ಪದವಿ ಹೊಂದಿರಬೇಕು. ಲೆಕ್ಕಪತ್ರಗಳ ನಿರ್ವಹಿಸುವಲ್ಲಿ ಕನಿಷ್ಠ 05 ವರ್ಷಗಳ ಅನುಭವ ಹೊಂದಿರಬೇಕು. ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಯಾವುದೇ ವಿಷಯದಲ್ಲಿ ಪದವಿ ಹೊಂದಿದ್ದು, ಕನಿಷ್ಠ 03 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಉಳ್ಳವರಾಗಿರಬೇಕು. ಇನ್ನು ಅಭ್ಯರ್ಥಿಗೆ 40 ವಯೋಮಾನ ಮೀರಿರಬಾರದು ಎಂದು ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

Tap to resize

Latest Videos

undefined

ವೇತನ ಬಡ್ತಿ ಒಂದು ಜೋಕ್, ಸಂಬಳ ಹೆಚ್ಚಬೇಕಂದ್ರೆ ಉದ್ಯೋಗ ಬದಲಿಸಿ; ಇಂಜಿನಿಯರ್ ಪೋಸ್ಟ್ ವೈರಲ್

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಪೂರ್ಣ ಹೆಸರು, ವಿಳಾಸ, ವಿದ್ಯಾರ್ಹತೆ, ಅನುಭವ ಪತ್ರ ಮತ್ತು ಇತರೆ ಮಾಹಿತಿಯೊಂದಿಗೆ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಬಾಲಕಾರ್ಮಿಕ ಯೋಜನಾ ಸಂಸ್ಥೆ, ಕೊಠಡಿ ಸಂಖ್ಯೆ: 03, ಕಾರ್ಮಿಕ ಇಲಾಖೆ, ಕಾರ್ಮಿಕ ಭವನ, ಬನ್ನೇರುಘಟ್ಟ ರಸ್ತೆ, ಬೆಂಗಳೂರು ಇಲ್ಲಿರುವ ರಾಜ್ಯ ಬಾಲಕಾರ್ಮಿಕ ಯೋಜನಾ ಸಂಘದ ಕಚೇರಿಗೆ 15 ದಿನಗಳ ಒಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8747845252 ಸಂಪರ್ಕಿಸಬಹುದು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರೂ ಆಗಿರುವ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

click me!