BHEL Recruitment 2022: ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗೆ ನೇಮಕಾತಿ

By Suvarna News  |  First Published Apr 3, 2022, 8:27 PM IST

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನವದೆಹಲಿ, ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ.  ಆನ್‌ಲೈನ್ ಮೂಲಕ ಅರ್ಜಿ  ಏಪ್ರಿಲ್​ 15 ಕೊನೆಯ ದಿನವಾಗಿದೆ.


ಬೆಂಗಳೂರು(ಎ.3): ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್  (Bharat Heavy Electricals Limited - BHEL) ನವದೆಹಲಿ, ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ.  ಒಟ್ಟು 4 ಕಾರ್ಯನಿರ್ವಾಹಕ (ಹಣಕಾಸು) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ  ಏಪ್ರಿಲ್​ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ​www.bhel.com ಗೆ ಭೇಟಿ ನೀಡಲು ಕೋರಲಾಗಿದೆ. 

ಶೈಕ್ಷಣಿಕ ವಿದ್ಯಾರ್ಹತೆ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ ಮ್ಯಾನೇಜ್‌ಮೆಂಟ್‌ನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರಬೇಕು.

Latest Videos

undefined

ಕೆಲಸದ ಅನುಭವ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಹಣಕಾಸು ಕ್ಷೇತ್ರದಲ್ಲಿ ಡೇಟಾ ವಿಶ್ಲೇಷಣೆ/ವಿಶ್ಲೇಷಣಾತ್ಮಕ ಕಾರ್ಯಯೋಜನೆಗಳನ್ನು ನಿಭಾಯಿಸುವ ಬಗ್ಗೆ ಕನಿಷ್ಠ 2 ವರ್ಷಗಳ ಅನುಭವವನ್ನು ಹೊಂದಿರಬೇಕು.

CCRI RECRUITMENT 2022: ಕಾಫಿ ಲ್ಯಾಬೋರೇಟರಿ ತಂತ್ರಜ್ಞ ಹುದ್ದೆಗೆ ನೇಮಕಾತಿ

ವಯೋಮಿತಿ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಗರಿಷ್ಟ 32 ವರ್ಷವಾಗಿರಬೇಕು.

ಅರ್ಜಿ ಶುಲ್ಕ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ₹354 ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು  ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ  ಅಭ್ಯರ್ಥಿಗಳಿಗೆ ಮಾಸಿಕ ₹71040 ವೇತನ ದೊರೆಯಲಿದೆ.

ಆಸ್ಟ್ರೇಲಿಯಾ- ಭಾರತ ದ್ವಿಪಕ್ಷೀಯ ಆರ್ಥಿಕ ಒಪ್ಪಂದ, 5 ವರ್ಷಗಳಲ್ಲಿ 10 ಲಕ್ಷ ಉದ್ಯೋಗ 

NIMHANS ಖಾಲಿ ಇರುವ 9 ಹುದ್ದೆಗಳಿಗೆ ನೇಮಕಾತಿ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು (National Institute of Mental Health and Neuro Sciences  -NIMHANS ) ಇಲ್ಲಿ ಖಾಲಿ ಇರುವ ವಿವಿಧ  ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.   ಲೆಕ್ಕಾಧಿಕಾರಿ (Accountant), ಯೋಜನೆಯ ಸಂಯೋಜಕರು (Project Coordinator), ಯೋಜನಾ ಅಧಿಕಾರಿ (Project officer) ಹುದ್ದೆಗಳು ಸೇರಿ ಒಟ್ಟು 9 ಹುದ್ದೆಗಳು ಖಾಲಿ ಇದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಮೇಲ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್​ 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ಈ ಮೇಲ್ ವಿಳಾಸ apcnimhans@gmail.com   ಹೆಚ್ಚಿನ ಮಾಹಿತಿಗೆ ಆಸಕ್ತ ಅಭ್ಯರ್ಥಿಗಳು  ಅಧಿಕೃತ ವೆಬ್‌ತಾಣ nimhans.ac.in ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಲು ಕೋರಲಾಗಿದೆ.

ಒಟ್ಟು 9 ಹುದ್ದೆಗಳ ಮಾಹಿತಿ
ಯೋಜನೆಯ ಸಂಯೋಜಕರು  : 2
ಯೋಜನಾ ಅಧಿಕಾರಿ: 6
ಲೆಕ್ಕಾಧಿಕಾರಿ​: 1

ಶೈಕ್ಷಣಿಕ ವಿದ್ಯಾರ್ಹತೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಜೊತೆಗೆ  ಸಂಶೋಧನೆ ಅಥವಾ ಕೆಲಸದಲ್ಲಿ ಕನಿಷ್ಠ 2 ವರ್ಷಗಳ ಅನುಭವವನ್ನು ಹೊಂದಿರಬೇಕು.

click me!