ಬಿಎಚ್‌ಇಎಲ್ ನೇಮಕಾತಿ 2026: ಭಾರತದಾದ್ಯಂತ ಕುಶಲಕರ್ಮಿ ಗ್ರೇಡ್ IV ಹುದ್ದೆಗಳಿಗೆ ಅರ್ಜಿ ಆಹ್ವಾನ

Published : Oct 29, 2026, 04:59 PM IST
BHEL

ಸಾರಾಂಶ

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) 660 ಕುಶಲಕರ್ಮಿ ಗ್ರೇಡ್ IV ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಮತ್ತು ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ನವೆಂಬರ್ 18, 2026 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ಆಕರ್ಷಕ ವೇತನ ಶ್ರೇಣಿ ನೀಡಲಾಗುವುದು.

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಆಗಸ್ಟ್ 2026ರ BHEL ಅಧಿಕೃತ ಅಧಿಸೂಚನೆಯ ಮೂಲಕ ಆರ್ಟಿಸನ್ ಟ್ರೇಡ್: ಫಿಟ್ಟರ್, ವೆಲ್ಡರ್, ಟರ್ನರ್, ಮೆಷಿನಿಸ್ಟ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಫೌಂಡ್ರಿಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಸಂಪೂರ್ಣ ವಿವರ:

ಸಂಸ್ಥೆಯ ಹೆಸರು : ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ( BHEL )ಹುದ್ದೆಗಳ ಸಂಖ್ಯೆ: 660

ಉದ್ಯೋಗ ಸ್ಥಳ: ಭಾರತದಾದ್ಯಂತ

ಹುದ್ದೆಯ ಹೆಸರು: ಕುಶಲಕರ್ಮಿ ಗ್ರೇಡ್ IV

ಸಂಬಳ: ಆರಂಭಿಕ ವೇತನ - 24,000/0 ಮತ್ತು ನಿಯಮಿತ ವೇತನ ಶ್ರೇಣಿ - ತಿಂಗಳಿಗೆ ರೂ. 29,500 - 65,000

ಹುದ್ದೆಗಳ ಸಂಖ್ಯೆ

ಫಿಟ್ಟರ್ 278

ವೆಲ್ಡರ್ 104

ಎಲೆಕ್ಟ್ರಿಷಿಯನ್ 90

ಟರ್ನರ್ 52

ಯಂತ್ರಶಿಲ್ಪಿ 101

ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ 23

ಫೌಂಡ್ರಿಮ್ಯಾನ್ 12

ಶೈಕ್ಷಣಿಕ ಅರ್ಹತೆ:

ಬಿಎಚ್‌ಇಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಆಯಾ ಟ್ರೇಡ್‌ನಲ್ಲಿ 10ನೇ ತರಗತಿ + ಎನ್‌ಟಿಸಿ/ಐಟಿಐ + ಎನ್‌ಎಸಿ ಪೂರ್ಣಗೊಳಿಸಿರಬೇಕು, ಜೊತೆಗೆ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯಸ್ಸು ಕನಿಷ್ಠ 18, ಗರಿಷ್ಠ ವಯಸ್ಸು 27 ವರ್ಷ.

ವಯೋಮಿತಿ ಸಡಿಲಿಕೆ:

ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ

ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ

ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

ಯುಆರ್/ಇಡಬ್ಲ್ಯೂಎಸ್/ಒಬಿಸಿ: 1072

ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ/ಮಾಜಿ ಸೈನಿಕರು: 472

ಆಯ್ಕೆ ಪ್ರಕ್ರಿಯೆ:

ಸಿಬಿಇ, ದಾಖಲೆ ಪರಿಶೀಲನೆ ಮತ್ತು ಕೌಶಲ್ಯ ಪರೀಕ್ಷೆ, ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

- ಮೊದಲನೆಯದಾಗಿ BHEL ನೇಮಕಾತಿ ಅಧಿಸೂಚನೆ 2026 ಅನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

- ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

-BHEL ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ (ಅನ್ವಯಿಸಿದರೆ) ಅಪ್‌ಲೋಡ್ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭವಾದ ದಿನಾಂಕ: ಅಕ್ಟೋಬರ್‌ 21-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್-18-2026

ತಾತ್ಕಾಲಿಕ ಪರೀಕ್ಷೆ ದಿನಾಂಕ: ಡಿಸೆಂಬರ್-11-2026

PREV
Read more Articles on
click me!

Recommended Stories

ಉದ್ಯೋಗಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್​ ಕೊಟ್ಟ Amazon: 250 ಮಂದಿ ವಜಾ ಮಾಡಿ ಇ-ಮೇಲ್​ ಸಂದೇಶ
ಎಸೆವ ಎಣ್ಣೆಯಿಂದಲೇ ಉದ್ಯೋಗ ಸೃಷ್ಟಿ! ಬೆಂಗಳೂರಿಗರ ಅದ್ಭುತ ಸಾಧನೆ: ಇಂಧನ ಭದ್ರತೆಗೆ ಇವರೇ ರೂವಾರಿ