ವಿವಿಧ ಹುದ್ದೆಗಳ ನೇಮಕಾತಿಗೆ BMRCL ಅರ್ಜಿ ಆಹ್ವಾನ

By Web DeskFirst Published Jan 3, 2019, 3:46 PM IST
Highlights

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯಾವ ಹುದ್ದೆಗಳು? ಬೇಕಾದ ದಾಖಲಾತಿಗಳೇನು? ಇನ್ನಿತರ ಮಾಹಿತಿ ಇಲ್ಲಿದೆ.

ಬೆಂಗಳೂರು, [ಜ.03 : ಬಿಎಂಆರ್‌ಸಿಎಲ್ 174 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 2/2/2019ರೊಳಗೆ ಅರ್ಜಿ ಸಲ್ಲಿಸಲು ಕೋರಿದೆ.

ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿರೋ ವಿವರ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) Maintainer 134, ಜ್ಯೂನಿಯರ್ ಇಂಜಿನಿಯರ್ 41, ಸೆಕ್ಷನ್ ಇಂಜಿನಿಯರ್ 37 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ರೈಲ್ವೇ ಇಲಾಖೆಯಲ್ಲಿ 14033 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Maintainer ಹುದ್ದೆಗೆ 10170-18500 ರೂ. ವೇತನ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35, ಎಸ್‌ಸಿ/ಎಸ್‌ಟಿ/ಪ್ರವರ್ಗ-1 40, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38, ನಿವೃತ್ತ ಯೋಧರಿಗೆ 50 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಜ್ಯೂನಿಯರ್ ಇಂಜಿನಿಯರ್ ಹುದ್ದೆಗೆ 14000-26950 ರೂ. ವೇತನ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35, ಎಸ್‌ಸಿ/ಎಸ್‌ಟಿ/ಪ್ರವರ್ಗ-1 40, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38, ನಿವೃತ್ತ ಯೋಧರಿಗೆ 50 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

BSF ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ ಶ್ರೇಣಿ: ಜ್ಯೂನಿಯರ್ ಇಂಜಿನಿಯರ್ ಹುದ್ದೆಗೆ 14000-26950 ರೂ. * ಸೆಕ್ಷನ್ ಇಂಜಿನಿಯರ್ ಹುದ್ದೆಗೆ 16000-30770 ರೂ. * Maintainer ಹುದ್ದೆಗೆ 10170-18500 ರೂ. ವೇತನ ನಿಗದಿ ಮಾಡಲಾಗಿದೆ. 

ಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35, ಎಸ್‌ಸಿ/ಎಸ್‌ಟಿ/ಪ್ರವರ್ಗ-1 40, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38, ನಿವೃತ್ತ ಯೋಧರಿಗೆ 50 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ/ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 354 ರೂ., ಸಾಮಾನ್ಯ, 2ಎ, 3ಬಿ, 3ಎ, 3ಬಿ, ನಿವೃತ್ತ ಯೋಧರಿಗೆ 826 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. 

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ  ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ನಲ್ಲಿ ತಿಳಿಯಲು ಇಲ್ಲಿ ಕ್ಲಿಕ್ಕಿಸಿ.

click me!