ಬಿಎಂಟಿಸಿ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹತಾ ಪಟ್ಟಿ ಪ್ರಕಟವಾಗಿದೆ. ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ಕರಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಬೆಂಗಳೂರು (ಅ.21): ಬಿಎಂಟಿಸಿ ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಪಾಸಾಗಿರುವ ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಉಲ್ಲೇಖ-1ರನ್ವಯ ನಿರ್ವಾಹಕ (ದರ್ಜೆ-3, ಮೇಲ್ವಿಚಾರಕೇತರ) ಹುದ್ದೆಗೆ ಉಳಿಕೆ ಮೂಲ ವೃಂದದಡಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ದಿನಾಂಕ:01/09/2024 ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಗಳಲ್ಲಿ ಸರಾಸರಿ ಶೇ.30 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಅಂಕಗಳ ಆಧಾರದ ಮೇಲೆ ಮೂಲದಾಖಲಾತಿಗಳ ಮತ್ತು ದೇಹದಾರ್ಢ್ಯತೆ ಪರಿಶೀಲನೆಗಾಗಿ ಅರ್ಹತಾ ಪಟ್ಟಿಯನ್ನು ಸಂಸ್ಥೆಯ ವೆಬ್ಸೈಟ್ www.mybmtc.karnataka.gov.in ನಲ್ಲಿ ಪ್ರಕಟಿಸಲಾಗಿದೆ.
undefined
ಪರಿಣೀತಿ ಚೋಪ್ರಾರಿಂದ ಸ್ಫೂರ್ತಿ ಪಡೆಯುವ ಸೀರೆ ಬ್ಲೌಸ್ ಡಿಸೈನ್‌ಗಳು!
ಅಭ್ಯರ್ಥಿಗಳು ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ ಲಾಗಿನ್ ಆಗಿ, ಕರೆಪತ್ರವನ್ನು ಸಂಸ್ಥೆಯ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಲು ಮುಂಬರುವ ದಿನಗಳಲ್ಲಿ ಅವಕಾಶ ಕಲ್ಪಿಸಲಾಗುವುದು. ತತ್ಸಂಬಂಧ ಅಭ್ಯರ್ಥಿಗಳು ಕಾಲಕಾಲಕ್ಕೆ ಸಂಸ್ಥೆಯ ವೆಬ್ಸೈಟ್ ಅನ್ನು ಪರಿಶೀಲಿಸುವುದು.
ಶೇಖ್ ಹಸೀನಾ ರಾಜೀನಾಮೆ ಪತ್ರ ನಮ್ಮ ಬಳಿ ಇಲ್ಲ, ಬಾಂಗ್ಲಾ ಅಧ್ಯಕ್ಷರ ಹೇಳಿಕೆ ಈಗ ವಿವಾದ
ಅಲ್ಲದೇ, ಕರೆಪತ್ರದಲ್ಲಿ ಮೂಲ ದಾಖಲೆ ಮತ್ತು ದೇಹದಾರ್ಢ್ಯತೆ ಪರಿಶೀಲನೆಗೆ ನಿಗಧಿಪಡಿಸಿದ ಸ್ಥಳ, ದಿನಾಂಕ ಮತ್ತು ಸಮಯಕ್ಕೆ ಸರಿಯಾಗಿ ಅಭ್ಯರ್ಥಿಗಳು ಪೂರಕ ದಾಖಲಾತಿಗಳೊಂದಿಗೆ ಹಾಜರಾಗತಕ್ಕದ್ದು. ಈ ಸಂಬಂಧ ಯಾವುದೇ ಪತ್ರ ವ್ಯವಹಾರಗಳನ್ನು ಮಾಡಲಾಗುವುದಿಲ್ಲ ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.