ಗಡಿ ಭದ್ರತಾ ಪಡೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಒಟ್ಟು 90 ಹುದ್ದೆಗಳು ಖಾಲಿ ಇದ್ದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 8 ಕೊನೆಯ ದಿನಾಂಕವಾಗಿದೆ.
ಬೆಂಗಳೂರು (ಮೇ.10): ದೇಶದ ಪ್ರಮುಖ ಸಶಸ್ತ್ರ ಪಡೆಯಾಗಿರುವ ಗಡಿ ಭದ್ರತಾ ಪಡೆ (Border Security Force- BSF) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ (Recruitment ) ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿರುವ ಬಿಎಸ್‌ಎಫ್ ಇನ್ಸ್ಪೆಕ್ಟರ್ (Inspector), ಸಬ್ ಇನ್ಸ್ ಪೆಕ್ಟರ್ (Sub Inspector) ಹೀಗೆ ಒಟ್ಟು 90 ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸುವಂತೆ ಕೋರಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 8 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ https://bsf.gov.in/Home ಗೆ ಭೇಟಿ ನೀಡಿ.
ಒಟ್ಟು 90 ಹುದ್ದೆಗಳ ಮಾಹಿತಿ ಇಂತಿದೆ
ಇನ್ಸ್ಪೆಕ್ಟರ್ : 1 ಹುದ್ದೆ
ಸಬ್ ಇನ್ಸ್ಪೆಕ್ಟರ್: 57 ಹುದ್ದೆಗಳು
ಜೂನಿಯರ್ ಇಂಜಿನಿಯರ್ (Junior Engineer-ಎಲೆಕ್ಟ್ರಿಕಲ್): 32 ಹುದ್ದೆಗಳು
VOCAL FOR LOCAL ಪ್ರತೀ ಜಿಲ್ಲೆಯಲ್ಲೂ ಉದ್ಯೋಗ ಮೇಳಕ್ಕೆ ಮುಂದಾದ ರಾಜ್ಯ ಸರಕಾರ
ಶೈಕ್ಷಣಿಕ ವಿದ್ಯಾರ್ಹತೆ: ದೇಶದ ಪ್ರಮುಖ ಸಶಸ್ತ್ರ ಪಡೆಯಾಗಿರುವ ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು.
ಇನ್ಸ್‌ಪೆಕ್ಟರ್ (Architect -ಆರ್ಕಿಟೆಕ್ಟ್) ಹುದ್ದೆಗೆ ಆರ್ಕಿಟೆಕ್ಚರ್‌ನಲ್ಲಿ ಪದವಿ ಪಡೆದಿರಬೇಕು. ಕೌನ್ಸಿಲ್ ಆಫ್ ಆರ್ಕಿಟೆಕ್ಚರ್‌ನಲ್ಲಿ (council of Architecture) ಹೆಸರು ನೋಂದಾಯಿಸಿರಬೇಕು.
ಸಬ್ ಇನ್‌ಸ್ಪೆಕ್ಟರ್ (ವರ್ಕ್ಸ್) ಹುದ್ದೆಗೆ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಮಾಡಿರಬೇಕು.
ಜೂನಿಯರ್ ಇಂಜಿನಿಯರ್/ ಸಬ್ ಇನ್ಸ್‌ಪೆಕ್ಟರ್ (ಎಲೆಕ್ಟ್ರಿಕಲ್) ಹುದ್ದೆಗೆ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಮಾಡಿರಬೇಕು.
ವಯೋಮಿತಿ: ದೇಶದ ಪ್ರಮುಖ ಸಶಸ್ತ್ರ ಪಡೆಯಾಗಿರುವ ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವಯೋಮಿತಿ ನಿಗದಿಯಾಗಿದೆ. ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.
BMRCL Recruitment 2022: ಫೈರ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ
ಅರ್ಜಿ ಶುಲ್ಕ: ದೇಶದ ಪ್ರಮುಖ ಸಶಸ್ತ್ರ ಪಡೆಯಾಗಿರುವ ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ₹200 ಅರ್ಜಿ ಶುಲ್ಕ ವಿಧಿಸಲಾಗಿದೆ. ಎಸ್ಸಿ, ಎಸ್ಟಿ, ಓಬಿಸಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ: ದೇಶದ ಪ್ರಮುಖ ಸಶಸ್ತ್ರ ಪಡೆಯಾಗಿರುವ ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಮೆಡಿಕಲ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Mandya Rain Effect 90ಕ್ಕೂ ಹೆಚ್ಚು ತೆಂಗಿನಮರ ನೆಲಸಮ, ಕಣ್ಣೀರಿಟ್ಟ ವೃದ್ಧೆ
ವೇತನ ವಿವರ: ದೇಶದ ಪ್ರಮುಖ ಸಶಸ್ತ್ರ ಪಡೆಯಾಗಿರುವ ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ದೊರೆಯಲಿದೆ.
ಇನ್ಸ್ಪೆಕ್ಟರ್ ಹುದ್ದೆಗೆ - ₹44900 ರಿಂದ ₹142400
ಸಬ್ ಇನ್ಸ್ಪೆಕ್ಟರ್ ಹುದ್ದೆಗೆ - ₹35400 ರಿಂದ ₹112400
ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್) ಹುದ್ದೆಗೆ - ₹35400 ರಿಂದ ₹112400