ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿ ಖಾಲಿ ಇರುವ ಕಾಫಿ ಲ್ಯಾಬೋರೇಟರಿ ತಂತ್ರಜ್ಞ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಏಪ್ರಿಲ್ 6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಬೆಂಗಳೂರು(ಎ.3): ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ( Central Coffee Research Institute) ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 1 ಕಾಫಿ ಲ್ಯಾಬೋರೇಟರಿ ತಂತ್ರಜ್ಞ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ https://indiacoffee.org/ ಗೆ ಭೇಟಿ ನೀಡಲು ಕೋರಲಾಗಿದೆ. ಅಭ್ಯರ್ಥಿಗಳು ಯಾವುದೇ ಸಂದೇಹ ಮತ್ತು ಪ್ರಶ್ನೆಗಳಿದ್ದರೆ atalincubationofccri@gmail.com ಈ ವಿಳಾಸಕ್ಕೆ ಮೇಲ್ ಮಾಡಬಹುದು.
ಶೈಕ್ಷಣಿಕ ವಿದ್ಯಾರ್ಹತೆ: ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿ ಖಾಲಿ ಇರುವ ಕಾಫಿ ಲ್ಯಾಬೊರೇಟರಿ ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು.
undefined
ವಯೋಮಿತಿ: ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿ ಖಾಲಿ ಇರುವ ಕಾಫಿ ಲ್ಯಾಬೊರೇಟರಿ ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ನಿಗದಿಪಡಿಸಲಾಗಿದೆ. ವರ್ಗಾನುಸಾರ ವಯೋಮಿತಿ ಸಡಿಲಿಕೆ ಇದೆ.
ಆಸ್ಟ್ರೇಲಿಯಾ- ಭಾರತ ದ್ವಿಪಕ್ಷೀಯ ಆರ್ಥಿಕ ಒಪ್ಪಂದ, 5 ವರ್ಷಗಳಲ್ಲಿ 10 ಲಕ್ಷ ಉದ್ಯೋಗ
ಅನುಭವ: ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿ ಖಾಲಿ ಇರುವ ಕಾಫಿ ಲ್ಯಾಬೊರೇಟರಿ ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕಾಫಿ ಗುಣಮಟ್ಟದ ಮೌಲ್ಯಮಾಪನ ಹಾಗೂ ಉತ್ಪನ್ನ ಅಭಿವೃದ್ಧಿಯಲ್ಲಿ ಕಾಫಿ ಗುಣಮಟ್ಟ ಹಾಗೂ ಉತ್ಪನ್ನ ಅಭಿವೃದ್ಧಿ ಪ್ರಯೋಗಾಲಯದಲ್ಲಿ 01 ವರ್ಷದ ಅನುಭವ ಪಡೆದಿರಬೇಕು.
ಅರ್ಜಿ ಶುಲ್ಕ: ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿ ಖಾಲಿ ಇರುವ ಕಾಫಿ ಲ್ಯಾಬೊರೇಟರಿ ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ₹500 ಅರ್ಜಿ ಶುಲ್ಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ: ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿ ಖಾಲಿ ಇರುವ ಕಾಫಿ ಲ್ಯಾಬೊರೇಟರಿ ತಂತ್ರಜ್ಞ ಹುದ್ದೆಗಳಿಗೆ ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ವೇತನ: ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿ ಖಾಲಿ ಇರುವ ಕಾಫಿ ಲ್ಯಾಬೊರೇಟರಿ ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹250000 ರಿಂದ ₹300000 ವೇತನ ದೊರೆಯಲಿದೆ.
KRIDL Recruitment 2022: ವಿವಿಧ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ
DRDO ಸಂಶೋಧನಾ ವಿಭಾಗದ ವಿವಿಧ ಹುದ್ದೆಗಳಿಗೆ ನೇಮಕಾತಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation - DRDO) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಕಿರಿಯ ಸಂಶೋಧಕ (Junior Research Fellow) ಮತ್ತು ಸಂಶೋಧನಾ ಸಹಾಯಕ (Research Associate) ಸೇರಿ ಒಟ್ಟು 8 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಎಪ್ರಿಲ್ 15 ಕೊನೆಯ ದಿನವಾಗಿದೆ.
ಒಟ್ಟು 8 ಹುದ್ದೆಗಳ ಮಾಹಿತಿ ಇಂತಿದೆ
ಸಂಶೋಧನಾ ಸಹಾಯಕ: 1 ಹುದ್ದೆ
ಕಿರಿಯ ಸಂಶೋಧಕ: 7 ಹುದ್ದೆಗಳು
ಶೈಕ್ಷಣಿಕ ಅರ್ಹತೆ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು.
ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಪಿಎಚ್‌ಡಿ ಅಥವಾ ರಸಾಯನಶಾಸ್ತ್ರದಲ್ಲಿ ತತ್ಸಮಾನ ಪದವಿ ಅಥವಾ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು.
ಕಿರಿಯ ಸಂಶೋಧಕ (ರಸಾಯನಶಾಸ್ತ್ರ, ಭೌತಶಾಸ್ತ್ರ) ಹುದ್ದೆಗೆ ರಸಾಯನಶಾಸ್ತ್ರ / ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ NET ಪರೀಕ್ಷೆ ಪಾಸಾಗಿರಬೇಕು.
ಕಿರಿಯ ಸಂಶೋಧಕ (ಮೆಕ್ಯಾನಿಕಲ್) ಹುದ್ದೆಗೆ ಮೆಕ್ಯಾನಿಕಲ್ ನಲ್ಲಿ BE/ B.Tech ಪದವಿ/ಸ್ನಾತಕೋತ್ತರ ಪದವಿ ಮಾಡಿರಬೇಕು. NET/ GATE ಪರೀಕ್ಷೆ ಪಾಸಾಗಿರಬೇಕು.