ಪಿಯು ಪಾಸಾದವರಿಗೆ ಕರ್ನಾಟಕ ಲೋಕಾಯುಕ್ತದಲ್ಲಿ ಉದ್ಯೋಗ; ತಿಂಗಳಿಗೆ 67 ಸಾವಿರ ಸಂಬಳ

By Mahmad Rafik  |  First Published Nov 13, 2024, 1:34 PM IST

ಕರ್ನಾಟಕ ಲೋಕಾಯುಕ್ತದಲ್ಲಿ ಖಾಲಿ ಇರುವ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ, ಅರ್ಜಿ ಶುಲ್ಕದ ಮಾಹಿತಿ ಲೇಖನದಲ್ಲಿದೆ .


ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್ ಸಿ ವೃಂದದ ಕಲ್ಯಾಣ ಕರ್ನಾಟಕದಲ್ಲಿ (ಸ್ಥಳೀಯ ವೃಂದ) ಖಾಲಿಯಿರುವ 14 ಕ್ಲಕ್-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  10 ಅಕ್ಟೋಬರ್ 2024ರಂದು ಹುದ್ದೆಗಳ ನೇಮಕಾತಿ ಸಂಬಂಧ ಅಧಿಸೂಚನೆ ಪ್ರಕಟವಾಗಿದೆ. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಈ ಹುದ್ದೆಗಳ ಕುರಿತ ಮಾಹಿತಿ ಇಲ್ಲಿದೆ 

ಹುದ್ದೆ: ಕ್ಲಕ್-ಕಂ-ಟೈಪಿಸ್ಟ್
ಹುದ್ದೆಗಳ ಸಂಖ್ಯೆ: 14
ವೇತನ: 34100-800-35700-900-39300-1000-43300-1125-47800-1250- 52800-1375-58300-1500-64300-1650-67600 
ವಿದ್ಯಾರ್ಹತೆ: ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಅಥವಾ ತತ್ಸಮಾನ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ

Tap to resize

Latest Videos

undefined

ಅರ್ಜಿ ಶುಲ್ಕ: 
ಸಾಮಾನ್ಯ ಅರ್ಹತೆ, ಪ್ರವರ್ಗ 2(ಎ), 2(ಬಿ),3(ಎ, 3(ಬಿ) ಮತ್ತು ಮಾಜಿ ಸೈನಿಕರಿಗೆ 250 ರೂಪಾಯಿ ಶುಲ್ಕ ಪಾವತಿಸಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.  ಶುಲ್ಕವನ್ನು ಆನ್‌ಲೈನ್ ಪೇಮೆಂಟ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಯುಪಿಐ ಮೂಲಕ ಪಾವತಿಸಬೇಕು. ಶುಲ್ಕ ಪಾವತಿಸದ ಅರ್ಜಿಗಳು ತಿರಸ್ಕರಿಸಲಾಗುತ್ತದೆ. ಒಮ್ಮೆ ಪಾವತಿಸಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲ್ಲ. 

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 30-11-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-11-2024 (ಮಧ್ಯರಾತ್ರಿ 11.59 ಗಂಟೆಯವರೆಗೆ)
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 30-11-2024 (ಮಧ್ಯರಾತ್ರಿ 11.59 ಗಂಟೆಯವರೆಗೆ)
ಅರ್ಜಿ ಸಲ್ಲಿಕೆ ಲಿಂಕ್: https://lokayukta.kar.nic.in/cct_rec.php

ವಯೋಮಿತಿ
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕದಂದು ಎಲ್ಲಾ ಪ್ರವರ್ಗದವರಿಗೆ  ಕನಿಷ್ಠ 18 ವರ್ಷಗಳು ತುಂಬಿರಬೇಕು. ಸರ್ಕಾರದ ಅಧಿಸೂಚನೆಯ ಪ್ರಕಾರ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ನೀಡಲಾಗಿರುತ್ತದೆ. 

ಪ.ಜಾ/ಪ.ಪಂ/ಪ್ರ-1  43 ವರ್ಷ
ಪ್ರವರ್ಗ II (ಎ), II (ಬಿ), III(ಎ), III (ಬಿ) 43 ವರ್ಷ
ಸಾಮಾನ್ಯ ಅರ್ಹತೆ 38 ವರ್ಷ

ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 1791 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಅರ್ಹತಾ ಷರತ್ತುಗಳು: 
01. ಭಾರತೀಯ ನಾಗರೀಕನಾಗಿರತಕ್ಕದ್ದು. 
02. ಆಧಾರ್ ಕಾರ್ಡ್‌ನ್ನು ಹೊಂದಿರವುದು. 
03. ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿಯಿರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿ ಪಡೆಯದೆ ನೇಮಕಾತಿಗೆ ಅರ್ಹರಾಗುವುದಿಲ್ಲ. 
04. ಅಭ್ಯರ್ಥಿಯು ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯು ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವವಿರುವ ಯಾವುದೇ ದೈಹಿಕ ನ್ಯೂನ್ಯತೆಯಿಂದ ಮುಕ್ತರಾಗಿರಬೇಕು. 
05. ದೈಹಿಕವಾಗಿ ಅನರ್ಹರಾಗಿದ್ದಾರೆಂಬುದಾಗಿ ವೈದ್ಯಕೀಯ ಮಂಡಳಿಯ ವರದಿಯ ಮೇಲೆ ಅನರ್ಹರೆಂಬುದಾಗಿ ತಿರಸ್ಕರಿಸುವ ಪೂರ್ಣ ವಿವೇಚನೆಯನ್ನು ನೇಮಕಾತಿ ಪ್ರಾಧಿಕಾರ ಕಾಯ್ದಿರಿಸಿಕೊಂಡಿದೆ ಮತ್ತು ನೇಮಕಾತಿ ಪ್ರಾಧಿಕಾರದ ವಿವೇಚನೆಯು ಯಾವುದೇ ವಿಧದಲ್ಲೂ ಈ ನಿಯಮಗಳ ಮೂಲಕ ಸೀಮಿತವಾಗಿರುವುದಿಲ್ಲ.

ಇದನ್ನೂ ಓದಿ:ಯೂನಿಯನ್ ಬ್ಯಾಂಕ್‌ನಲ್ಲಿ 85 ಸಾವಿರ ಸಂಬಳದ 1500 ಹುದ್ದೆಗಳಿಗೆ ಅರ್ಜಿ ಆಹ್ವಾನ; ಕನ್ನಡ ಬರುತ್ತಾ ನೀವು ಅಪ್ಲೈ ಮಾಡಿ

click me!