ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. 261 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 06, 2022 ಅರ್ಜಿ ಸಲ್ಲಿಸಲು ಕೊನೆಯ ಕೊನೆಯ ದಿನವಾಗಿದೆ.
ಬೆಂಗಳೂರು (ಮೇ.16): ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ (Cochin Shipyard Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಹಿರಿಯ ಶಿಪ್ ಡ್ರಾಫ್ಟ್‌ಸ್ಮನ್ (Senior Ship Draftsman), ಕಿರಿಯ ತಂತ್ರಜ್ಞ ಸಹಾಯಕ (Jr.Technical Assistant), ಸಹಾಯಕ (Assistant) ಹಾಗೂ ವಿವಿಧ 261 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 06, 2022 ಕೊನೆಯ ದಿನವಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ cochinshipyard.in ಗೆ ಭೇಟಿ ನೀಡಬಹುದು.
ಒಟ್ಟು 261 ಹುದ್ದೆಗಳ ಮಾಹಿತಿ ಇಂತಿದೆ
ಹಿರಿಯ ಹಡಗು ಡ್ರಾಫ್ಟ್‌ಮನ್ (ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಇನ್‌ಸ್ಟ್ರುಮೆಂಟೇಶನ್): 6 ಹುದ್ದೆಗಳು
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ (ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್): 4 ಹುದ್ದೆಗಳು
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ (ABAP): 1 ಹುದ್ದೆ
ಪ್ರಯೋಗಾಲಯ ಸಹಾಯಕ - Laboratory Assistant (ಮೆಕ್ಯಾನಿಕಲ್): 1 ಹುದ್ದೆ
ಪ್ರಯೋಗಾಲಯ ಸಹಾಯಕ (ರಾಸಾಯನಿಕ): 1 ಹುದ್ದೆ
ಸ್ಟೋರ್ ಕೀಪರ್ (Store Keeper ): 4 ಹುದ್ದೆಗಳು
ಜೂನಿಯರ್ ಕಮರ್ಷಿಯಲ್ ಅಸಿಸ್ಟೆಂಟ್ (Junior Commercial Assistant): 2 ಹುದ್ದೆಗಳು
ಸಹಾಯಕ : 7 ಹುದ್ದೆಗಳು
ವೆಲ್ಡರ್ ಕಮ್ ಫಿಟ್ಟರ್ (ವೆಲ್ಡರ್/ ವೆಲ್ಡರ್ (ಗ್ಯಾಸ್ & ಎಲೆಕ್ಟ್ರಿಕ್), ಪ್ಲಂಬರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಫಿಟ್ಟರ್, ಶೀಟ್ ಮೆಟಲ್ ವರ್ಕರ್): 206 ಹುದ್ದೆಗಳು
ಫಿಟ್ಟರ್ (ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್): 16 ಹುದ್ದೆಗಳು
ಶಿಪ್ ರೈಟ್ ವುಡ್ (Shipwright Wood): 3 ಹುದ್ದೆಗಳು
CHIKKABALLAPURA ANGANWADI RECRUITMENT 2022: ಮೇ. 30ರೊಳಗೆ ಅರ್ಜಿ ಸಲ್ಲಿಸಿ
ಶೈಕ್ಷಣಿಕ ವಿದ್ಯಾರ್ಹತೆ: ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಐಟಿಐ / ಡಿಪ್ಲೊಮ / ಇಂಜಿನಿಯರಿಂಗ್ ವಿದ್ಯಾರ್ಹತೆ ಪಡೆದಿರಬೇಕು.
ಅರ್ಜಿ ಶುಲ್ಕ: ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ ₹400, ಒಬಿಸಿ ಅಭ್ಯರ್ಥಿಗಳಿಗೆ ₹400, ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
CRIS Recruitment 2022: ರೈಲ್ವೆ ಮಾಹಿತಿ ಕೇಂದ್ರದಲ್ಲಿ ಇಂಜಿನಿಯರ್ ಉದ್ಯೋಗ
ವೇತನ ವಿವರ: ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ಮಾಸಿಕ ₹22,500 ರಿಂದ ₹77,000 ವೇತನ ದೊರೆಯಲಿದೆ.
ಅರ್ಜಿಯೊಂದಿಗೆ ಲಗತ್ತಿಸಬೇಕಾದ ಅಗತ್ಯ ದಾಖಲೆಗಳು
ಆಧಾರ್ ಕಾರ್ಡ್
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
ಹುದ್ದೆಗೆ ಸಂಬಂಧಿಸಿ ಕೇಳಲಾದ ವಿದ್ಯಾರ್ಹತೆ ದಾಖಲೆ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಸ್ಕ್ಯಾನ್ ಮಾಡಿದ ಭಾವಚಿತ್ರ ಮತ್ತು ಸಹಿ ಇತ್ಯಾದಿ
IOCL Recruitment 2022: ವಿವಿಧ ಜೂನಿಯರ್ ಇಂಜಿನಿಯರಿಂಗ್ ಹುದ್ದೆಗಳಿಗೆ ನೇಮಕಾತಿ
ದೇಶದಾದ್ಯಂತ ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನ: ಕರ್ನಾಟಕ ಬ್ಯಾಂಕ್ (Karnataka Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ದೇಶದಾದ್ಯಂತ ಇರುವ ಬ್ರ್ಯಾಂಚ್ ಮತ್ತು ಪ್ರಮುಖ ಕೇಂದ್ರಗಳಲ್ಲಿ ಇರುವ ಗುಮಾಸ್ತ ( Clerk ) ಹುದ್ದೆಗಳಿಗೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಮೇ 21 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು https://www.karnatakabank.com/ ಗೆ ಭೇಟಿ ನೀಡಲು ಕೋರಲಾಗಿದೆ. ನೇಮಕಾತಿ ಅಧಿಸೂಚನೆ ನೋಡಲು ಈ ಲಿಂಕ್ ಕ್ಲಿಕ್ ಮಾಡಿ