ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2019-20ನೇ ಸಾಲಿಗೆ ಈ ಕೆಳಕಂಡ ಯೋಜನೆಗಳಡಿ ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಕಲಬುರಗಿ,(ಜ.13): ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಸಾಲ ಯೋಜನೆಗಳಾದ ಅವಧಿ ಸಾಲ ಯೋಜನೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ, ನ್ಯೂ ಸ್ವರ್ಣಿಮಾ ಯೋಜನೆ, ಮೈಕ್ರೋ ಫೈನಾನ್ಸ್ ಸಾಲ ಯೋಜನೆ, ಮಹಿಳಾ ಸಮೃದ್ಧಿ ಯೋಜನೆ ಹಾಗೂ ಚಿಕ್ಕಸಾಲ ಯೋಜನೆಗಳಡಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
undefined
ವಿವಿಧ ಹುದ್ದೆ ನೇಮಕಾತಿಗೆ ಹೆವಿ ವಾಟರ್ ಬೋರ್ಡ್ ಅರ್ಜಿ ಆಹ್ವಾನ
ಯಾವ ಜಾತಿಯವರು ಅರ್ಜಿ ಸಲ್ಲಿಸಬಹುದು?
ಅರ್ಜಿದಾರರು (ವಿಶ್ವಕರ್ಮ ಮತ್ತು ಇದರ ಉಪ ಸಮುದಾಯಗಳನ್ನು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ) ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಅರ್ಜಿದಾರರ ಮತ್ತು ಅವರ ಕುಟುಂಬದ ವಾರ್ಷಿಕ ವರಮಾನ 3,00,000 ರೂ. ದೊಳಗಿರಬೇಕು.
ವಯೋಮಿತಿ: 18 ರಿಂದ 55 ವರ್ಷದೊಳಗಿರಬೇಕು. ಆಧಾರ್ ಸಂಖ್ಯೆ ಹೊಂದಿರಬೇಕು. ಐ.ಎಫ್.ಸಿ. ಕೋಡ್ ಹೊಂದಿರುವ ರಾಷ್ಟ್ರೀಕೃತ, ಗ್ರಾಮೀಣ ಬ್ಯಾಂಕ್ ಖಾತೆ ಹೊಂದಿರಬೇಕು.
ಕರ್ಣಾಟಕ ಬ್ಯಾಂಕ್‌ನಲ್ಲಿ ನೇಮಕಾತಿ: ಅರ್ಜಿ ಹಾಕಿ
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಎರಡನೇ ಮಹಡಿ, ಸಿಟಿ ಸ್ಕ್ವೆರ್ ಬೀಲ್ಡಿಂಗ್, ಬಡೇಪೂರ ಮೂರನೇ ಕ್ರಾಸ್, ವೀರಶೈವ ಕಲ್ಯಾಣ ಮಂಟಪದ ಎದುರುಗಡೆ, ಖರ್ಗೆ ಪೆಟ್ರೋಲ್ ಬಂಕ್ ಹತ್ತಿರ, ಹಾಗರಗಾ ರಿಂಗ್ ರೋಡ್, ಕಲಬುರಗಿ-585105 ಕಚೇರಿಯಿಂದ ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಿಂದ ಅಥವಾ ನಿಗಮದ www.karnataka.gov.in/dbcdc ವೆಬ್‍ಸೈಟ್‍ದಿಂದ ಪಡೆಯಬಹುದಾಗಿದೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ 2020ರ ಜನವರಿ 31 ರೊಳಗಾಗಿ ಸಲ್ಲಿಸಬೇಕು.
ಅಭ್ಯರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್‍ನ್ನು ಹಾಗೂ ನಿಗಮದ ಕಚೇರಿ ದೂರವಾಣಿ ಸಂಖ್ಯೆ 08472-278635ಗೆ ಸಂಪರ್ಕಿಸಲು ಕೋರಲಾಗಿದೆ.