ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ: ಅರ್ಜಿ ಹಾಕಿ

By Web DeskFirst Published Oct 5, 2019, 3:07 PM IST
Highlights

ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ. ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿ ಈ ಕೆಳಗಿನಂತಿದೆ.

ಧಾರವಾಡ, (ಅ.05): ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಇಲಾಖೆಯಲ್ಲಿ ಖಾಲಿ ಇರುವ 9 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 

ಆಸಕ್ತ ಹಾಗೂ  ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 30,2019ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 

ಜಾಬ್ಸ್‌ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ:  ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ SSLC ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ದರ್ಜೆ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿ ನಡೆಸುವ ಸೆಕ್ರೆಟರಿಯಲ್ ಪ್ರ್ಯಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯದಲ್ಲಿ ಉತ್ತೀರ್ಣರಾಗಿಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.   ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಕ್ಕೆ  40 ವರ್ಷ,  ಪ್ರವರ್ಗ 2ಎ,2ಬಿ,3ಎ,3ಬಿ: 38ವರ್ಷ ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. 

ವೇತನ ಶ್ರೇಣಿ:  27,650  ರಿಂದ 52,650 ರೂ  ತಿಂಗಳಿಗೆ. ಮತ್ತು ಇತರೆ ಭತ್ಯೆಗಳನ್ನು ನೀಡಲಾವುದು.

ಆಯ್ಕೆಯ ವಿಧಾನ: 

* ಪ್ರತಿ ಅರ್ಹತಾ ಪರೀಕ್ಷೆಯು ಗರಿಷ್ಟ 100 ಅಂಕಗಳಾಗಿದ್ದು ಪರೀಕ್ಷೆಯಲ್ಲಿ ಉತ್ತೀರ್ಣತೆಗೆ ಕನಿಷ್ಟ 50 ಅಂಕಗಳನ್ನು ಪಡೆಯತಕ್ಕದ್ದು. ಮತ್ತು ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. 

* ಸಂದರ್ಶನವು 10 ಅಂಕಗಳನ್ನೊಳಗೊಂಡಿರುತ್ತದೆ. ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕನ್ನಡ ಭಾಷೆಯಲ್ಲಿ ಒಂದು ನಿಮಿಷಕ್ಕೆ 260 ಅಕ್ಷರಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನ ನೀಡಿ ಅದನ್ನು ಬೆರಳಚ್ಚು ಯಂತ್ರದ/ ಕಂಪ್ಯೂಟರ್ ಮೂಲಕ 45 ನಿಮಿಷಗಳಲ್ಲಿ ಲಿಪ್ಯಂತರ ಮಾಡಬೇಕು. 

* ಅಭ್ಯರ್ಥಿಗಳಿಗೆ ಆಂಗ್ಲ ಭಾಷೆಯಲ್ಲಿ ಒಂದು ನಿಮಿಷಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನ ನೀಡಿ ಅದನ್ನು ಬೆರಳಚ್ಚು ಯಂತ್ರದ / ಕಂಪ್ಯೂಟರ್ ಮೂಲಕ 45 ನಿಮಿಷಗಳಲ್ಲಿ ಲಿಪ್ಯಂತರ ಮಾಡಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಇನ್ನಷ್ಟು ಮಾಹಿತಿ ತಿಳಿಯಲು .

click me!