ಅಗ್ನಿಪಥ್‌ ಯೋಜನೆಯ ವಯೋಮಿತಿ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

Published : Jun 17, 2022, 12:00 AM ISTUpdated : Jun 17, 2022, 12:15 AM IST
ಅಗ್ನಿಪಥ್‌ ಯೋಜನೆಯ ವಯೋಮಿತಿ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ಸಾರಾಂಶ

*  ನೇಮಕಾತಿಗಳ ವಯೋಮಿತಿಯನ್ನ ಹದಿನೋಳುವರೆ ವರ್ಷದಿಂದ - 21 ವರ್ಷಕ್ಕೆ ನಿಗದಿ *  2022 ಕ್ಕೆ ಅಗ್ನಿಪಥ್ ಯೋಜನೆಗೆ ನೇಮಕಾತಿ ಪ್ರಕ್ರಿಯೆ *  ಗರಿಷ್ಠ ವಯಸ್ಸಿನ ಮಿತಿಯನ್ನು 23 ವರ್ಷಗಳಿಗೆ ಹೆಚ್ಚಳ  

ನವದೆಹಲಿ(ಜೂ.17): ಭಾರತೀಯ ಸೇನೆಯ ಅಗ್ನಿಪಥ್ ಯೋಜನೆಯಲ್ಲಿ ಮಹತ್ವದ ಬದಲಾವಣೆಯನ್ನು ಕೇಂದ್ರ ಸರ್ಕಾರ ಘೋಷಷಣೆ ಮಾಡಿದೆ. ಸಶಸ್ತ್ರ ಪಡೆಗಳಲ್ಲಿ ಎಲ್ಲ ಹೊಸ ನೇಮಕಾತಿಗಳ ವಯೋಮಿತಿಯನ್ನ ಹದಿನೋಳುವರೆ(17) ವರ್ಷದಿಂದ - 21 ವರ್ಷಗಳು ಎಂದು ಮೊದಲು ನಿಗದಿ ಮಾಡಲಾಗಿತ್ತು.

ಕಳೆದ ಎರಡು ವರ್ಷಗಳಲ್ಲಿ ಮಹಾಮಾರಿ ಕೊರೋನಾ ಹಾವಳಿಯಿಂದಾಗಿ ನೇಮಕಾತಿಯನ್ನು ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಆದ್ದರಿಂದ 2022ರ ಅಗ್ನಿಪಥ್ ಯೋಜನೆಗೆ ನೇಮಕಾತಿ ಪ್ರಕ್ರಿಯೆಗೆ ಗರಿಷ್ಠ ವಯಸ್ಸಿನ ಮಿತಿಯನ್ನು 23 ವರ್ಷಗಳಿಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.


 

ಅಗ್ನಿಪಥ್ ಯೋಜನೆಗೆ 21 ವರ್ಷದಿಂದ 23 ವರ್ಷಗಳಿಗೆ ವಿಸ್ತರಿಸುವ ಮೂಲಕ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸರ್ಕಾರವು ಒಂದು ಬಾರಿ ಮನ್ನಾ ಮಾಡುವ ನಿರ್ಧಾರ ಮಾಡಿದೆ. ಕಳೆದ ಎರಡು ವರ್ಷಗಳಲ್ಲಿ ಯಾವುದೇ ನೇಮಕಾತಿ ನಡೆಯದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಕ್ಷಣಾ ಸಚಿವಾಲಯ ಕೂಡ ತಿಳಿಸಿದೆ.

ಕಳೆದ ಎರಡು ವರ್ಷಗಳಲ್ಲಿ ನೇಮಕಾತಿಯನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ ಎಂಬ ಅಂಶವನ್ನು ಅರಿತು, 2022 ರ ಪ್ರಸ್ತಾವಿತ ನೇಮಕಾತಿ ಚಕ್ರಕ್ಕೆ ಒಂದು ಬಾರಿ ವಿನಾಯಿತಿ ನೀಡಲು ಸರ್ಕಾರ ನಿರ್ಧರಿಸಿದೆ. ಅಗ್ನಿಪಥ್ ಯೋಜನೆಗೆ ಹದಿನೇಳುವರೆ ವರ್ಷ ಕನಿಷ್ಠ ಹಾಗು 21 ವರ್ಷ ಗರಿಷ್ಠ ವಯೋಮಿತಿ ನಿಗದಿ ಮಾಡಿದ್ದಕ್ಕೆ, ಕಳೆದ ಎರಡು ವರ್ಷಗಳಿಂದ ಸೇನಾ ನೇಮಾಕಾತಿಗಾಗಿ ಪ್ರಯತ್ನ ನಡೆಸುತ್ತಿದ್ದ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದರು. 

ಇದೇ ಕಾರಣಕ್ಕಾಗಿ ಬಿಹಾರ, ಹರಿಯಾಣ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ದೊಡ್ಡ ಮಟ್ಟದ ಹಿಂಸಾಚಾರ ನಡೆದಿದ್ದ, ರೈಲು, ಬಸ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು.

PREV
click me!

Recommended Stories

ಲೋಕಸಭೆಯಲ್ಲಿ ನೌಕರರ ಪರ ಮಸೂದೆ ಮಂಡನೆ: ಉದ್ಯೋಗಿಗಳ ಲೈಫ್​ ಜಿಂಗಾಲಾಲಾ- ಏನಿದೆ ಇದರಲ್ಲಿ?
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ