ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

By Web Desk  |  First Published Jan 29, 2019, 6:29 PM IST

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ ಮತ್ತು ಇತರೆ ಮಾಹಿತಿ ಇಲ್ಲಿದೆ.


ಬೆಂಗಳೂರು, [ಜ.29]: ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ  ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಹಾವೇರಿ ಜಿಲ್ಲೆಯ 7ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ12 ಅಂಗನವಾಡಿ ಕಾರ್ಯಕರ್ತೆ ಮತ್ತು 44  ಸಹಾಯಕಿ ಹುದ್ದೆ ಸೇರಿದಂತೆ ಒಟ್ಟು 56  ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

Tap to resize

Latest Videos

ಗ್ರಾಮಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 21.2019ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಭಾರತೀಯ ಪಶ್ಚಿಮ ರೈಲ್ವೆ ಇಲಾಖೆಯಲ್ಲಿ 1944 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಇನ್ನು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. 

ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

click me!