ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಕಂಪನಿಯು ಖಾಲಿ ಇರುವ ಭದ್ರತಾ ಅಧಿಕಾರಿ ಮತ್ತು ಅಧಿಕಾರಿ ಸೇರಿ ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮೇ.24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಬೆಂಗಳೂರು (ಮೇ.7): ಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited-HAL) ಕಂಪನಿಯು ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಭದ್ರತಾ ಅಧಿಕಾರಿ (Security Officer), ಅಧಿಕಾರಿ (Officer) ಸೇರಿ ಒಟ್ಟು 10 ಹುದ್ದೆಗಳು ಖಾಲಿ ಇದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ.24 ರೊಳಗೆ ಅರ್ಜಿ ಸಲ್ಲಿಸಬೇಕು. ನೇಮಕಾತಿ ಬಗೆಗಿನ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://hal-india.co.in/ ಭೇಟಿ ನೀಡಬಹುದು.
ಶೈಕ್ಷಣಿಕ ವಿದ್ಯಾರ್ಹತೆ: ಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹುದ್ದೆಗೆ ಅನುಸಾರವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿರಬೇಕು.
undefined
ವಯೋಮಿತಿ: ಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ UR/EWS ಅಭ್ಯರ್ಥಿಗಳು ಗರಿಷ್ಠ 35, OBC ಅಭ್ಯರ್ಥಿಗಳು ಗರಿಷ್ಠ 38 ಮತ್ತು SC/ST ಅಭ್ಯರ್ಥಿಗಳು 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ರೈಲ್ವೇ ಪ್ರಯಾಣಿಕರಿಗೆ ಅನುಕೂಲಕ್ಕೆ 50 ಸಾವಿರಕ್ಕೂ ಹೆಚ್ಚು 'KARMA YOGIS' ನಿಯೋಜನೆ
ಅರ್ಜಿ ಶುಲ್ಕ: ಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಅಭ್ಯರ್ಥಿಗಳು ₹500 ಮತ್ತು ಇತರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ: ಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹40000 ರಿಂದ ₹140000 ವೇತನ ದೊರೆಯಲಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ:
ವ್ಯವಸ್ಥಾಪಕರು (HR),
ನೇಮಕಾತಿ ವಿಭಾಗ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಕಾರ್ಪೊರೇಟ್ ಕಚೇರಿ 15/1 ಕಬ್ಬನ್ ರಸ್ತೆ,
ಬೆಂಗಳೂರು - 560001
Chief Manager(HR), Recruitment Section
Hindustan Aeronautics Limited
Corporate Office
15/1 Cubbon Road,
Bangalore – 560 001.
Indian Bank Recruitment 2022: ಕ್ರೀಡಾ ಕೋಟದ ಮೇಲೆ ಅರ್ಜಿ ಆಹ್ವಾನ
ರೈಲ್ವೆ ಇಲಾಖೆ ಸೇರ ಬಯಸುವವರಿಗೆ ಸುವರ್ಣಾವಕಾಶ: ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶವೊಂದು ಒಲಿದು ಬಂದಿದೆ. ಆಗ್ನೇಯ ಮಧ್ಯ ರೈಲ್ವೆ (South East Central Railway -SECR ) ಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು apprenticeshipindia.org ನಲ್ಲಿ ಅಪ್ರೆಂಟಿಸ್‌ಶಿಪ್ ಇಂಡಿಯಾದ ಅಧಿಕೃತ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಒಟ್ಟು 1,033 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 24, 2022 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ತಾಣ https://secr.indianrailways.gov.in/ ಗೆ ಭೇಟಿ ನೀಡಬಹುದು.
ಶೈಕ್ಷಣಿಕ ವಿದ್ಯಾರ್ಹತೆ: ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮತ್ತು ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಅದರಂತೆ 10 ನೇ ತರಗತಿ, ಕನಿಷ್ಠ ಶೇ.55 ಅಂಕಗಳೊಂದಿಗೆ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು ಜೊತೆಗೆ ವ್ಯಾಪಾರ ವಿಷಯದಲ್ಲಿ ಐಟಿಐ ಮಾಡಿರಬೇಕು.
ವಯೋಮಿತಿ: ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 15 ರಿಂದ 24 ವರ್ಷದ ಒಳಗಿರಬೇಕು.