ಬ್ಯಾಂಕ್ ಜಾಬ್ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಸುವರ್ಣಾವಕಾಶ, 6715 ಹುದ್ದೆಗಳಿಗೆ IBPS ಆಹ್ವಾನ, 80 ಸಾವಿರ ವೇತನ

Published : Jul 02, 2026, 10:31 AM IST
IBPS

ಸಾರಾಂಶ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ದೇಶದ ಸರ್ಕಾರಿ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 6715 ಪ್ರೊಬೇಷನರಿ ಆಫೀಸರ್/ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಪದವಿ ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯಲಿದೆ.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ದೇಶದ ಪ್ರಮುಖ ಸರ್ಕಾರಿ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಬೃಹತ್ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಯ ವಿವರಗಳು:

ಸಂಸ್ಥೆಯ ಹೆಸರು: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್

ಹುದ್ದೆಗಳ ಸಂಖ್ಯೆ: 6715

ಹುದ್ದೆ ಹೆಸರು: ಪ್ರೊಬೇಷನರಿ ಆಫೀಸರ್/ ಮ್ಯಾನೇಜ್ಮೆಂಟ್ ಟ್ರೈನಿ

ಉದ್ಯೋಗ ಸ್ಥಳ: ಅಖಿಲ ಭಾರತ

ಶೈಕ್ಷಣಿಕ ಅರ್ಹತೆ:

ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ

ಎಸ್‌ಸಿ/ಎಸ್‌ಟಿ/ಇಎಸ್‌ಎಂ ಅಭ್ಯರ್ಥಿಗಳಿಗೆ: 05 ವರ್ಷ

ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ:10 ವರ್ಷ

ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆರಂಭದಲ್ಲೇ ₹48,480– 85,920/- ವರೆಗೆ ಅತ್ಯುತ್ತಮ ಸಂಬಳ ಸಿಗಲಿದೆ.

ಆಯ್ಕೆ ವಿಧಾನ :

ಪೂರ್ವಭಾವಿ ಪರೀಕ್ಷೆ

ಮುಖ್ಯ ಪರೀಕ್ಷೆ

ಸಂದರ್ಶನ

ಅರ್ಜಿ ಶುಲ್ಕ:

SC/ ST/ PwBD ಅಭ್ಯರ್ಥಿಗಳಿಗೆ: 175 ರು.

ಇತರೆ ಎಲ್ಲಾ ಅಭ್ಯರ್ಥಿಗಳಿಗೆ (General/OBC/EWS): 850 ರು.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಿ.

ನಿಮ್ಮ ಇತ್ತೀಚಿನ ಫೋಟೋ, ಸಹಿ, ಇಮೇಲ್ ಐಡಿ ಮತ್ತು ಅಗತ್ಯ ಶೈಕ್ಷಣಿಕ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

ಕೆಳಗೆ ನೀಡಿರುವ ಲಿಂಕ್ ಬಳಸಿ ಆನ್‌ಲೈನ್ ಅರ್ಜಿಯನ್ನು ನಿಖರವಾಗಿ ಭರ್ತಿ ಮಾಡಿ.

ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ, ‘Submit’ ಬಟನ್ ಕ್ಲಿಕ್ ಮಾಡಿ.

ಮುಂದಿನ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಪ್ರಿಂಟ್‌ಔಟ್ ತೆಗೆದುಕೊಳ್ಳುವುದನ್ನು ಮರೆಯಬೇಡಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭವಾದ ದಿನಾಂಕ: ಜುಲೈ 01-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 21-2026

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಜುಲೈ 21-2026

PREV
Read more Articles on
click me!

Recommended Stories

Bengaluru Jobs: ಹಗಲು-ರಾತ್ರಿ ಕೆಲಸ ಮಾಡಿದ್ರೂ ₹2,000 ಹೈಕ್; ರಾಜೀನಾಮೆ ಕೊಟ್ಟು ತಮಟೆ ಬಾರಿಸಿ ಕುಣಿದ ಉದ್ಯೋಗಿ!
2500 Govt Jobs: ಸರ್ಕಾರಿ ನೌಕರಿ ಕನಸು ಕಂಡವರಿಗೆ ಬಂಪರ್ ಸುದ್ದಿ: ಬರೋಬ್ಬರಿ 2500 ಹುದ್ದೆಗಳಿಗೆ ನೇಮಕಾತಿ ಬಿಗ್ ಅಪ್ಡೇಟ್!