ಬರೋಬ್ಬರಿ 12075 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

By Web DeskFirst Published Sep 13, 2019, 2:40 PM IST
Highlights

12075 ಕ್ಲರ್ಕ್‌ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಐಬಿಪಿಎಸ್ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ ಮತ್ತು ಅರ್ಜಿ ಶುಲ್ಕದ ವಿವರವನ್ನು ತಿಳಿಯಲು ಮುಂದೆ ಓದಿ.

ಬೆಂಗಳೂರು, (ಸೆ.13): ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್), ಸಾರ್ವಜನಿಕ ವಲಯದ ಬ್ಯಾಂಕ್​ಗಳ 12075ಕ್ಕೂ ಅಧಿಕ ಕ್ಲರ್ಕ್ ಶ್ರೇಣಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಕೆನರಾ, ಅಲಹಾಬಾದ್, ಬ್ಯಾಂಕ್ ಆಫ್ ಬರೋಡಾ, ಇಂಡಿಯಾ, ಮಹಾರಾಷ್ಟ್ರ, ಕಾಪೋರೇಷನ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಸೇರಿ ಹಲವು ಬ್ಯಾಂಕ್​ಗಳಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗೆ ಭರ್ತಿ ಮಾಡಲು ಪ್ರವೇಶ ಪರೀಕ್ಷೆ ನಡೆಯಲಿದೆ. 

ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಯಾವುದೇ ಅರ್ಜಿ ಶುಲ್ಕವಿಲ್ಲ

ಪೂರ್ವ ಪರೀಕ್ಷೆ ಡಿಸೆಂಬರ್.7, 8, 14, 21 ರಂದು ನಡೆಯಲಿವೆ.  ಇನ್ನು ಫಲಿತಾಂಶ ಮುಂದಿನ ವರ್ಷ ಅಂದ್ರೆ ಜನವರಿ 2020ರಂದು ಪ್ರಕಟವಾಗಲಿದೆ.

ಮುಖ್ಯ ಪರೀಕ್ಷೆ ಜನವರಿಯಲ್ಲಿ ನಡೆಯಲಿದೆ. ತಾತ್ಕಾಲಿಕ ಆಯ್ಕೆ ಪಟ್ಟಿ 2020ರ ಏಪ್ರಿಲ್​ನಲ್ಲಿ ಬಿಡುಗಡೆಯಾಗಲಿದೆ. ಅಭ್ಯರ್ಥಿಗಳು ಸೆ. 17ರಿಂದ ibps.in ವೆಬ್ ಸೈಟ್​ನಲ್ಲಿ ಆನ್​ಲೈನ್ ಅರ್ಜಿ ಸಲ್ಲಿಸಬಹುದು.  ಅರ್ಜಿ ಸಲ್ಲಿಸಲು ಅ.9  ಕೊನೆ ದಿನವಾಗಿದೆ.

ವಿದ್ಯಾರ್ಹತೆ: ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಪಡೆದಿರಬೇಕು. ಅಥವಾ ಕೇಂದ್ರ ಸರ್ಕಾರದಿಂದ ಅಂಗೀಕೃತವಾಗಿರುವ ಸಂಸ್ಥೆ/ಕಾಲೇಜುಗಳಲ್ಲಿ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ : ಸೆಪ್ಟೆಂಬರ್ 1,2019ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಯು ದಿನಾಂಕ 02-09-1991 ಗಿಂತ ಮೊದಲು, 01-09-1999 ನಂತರ ಜನಿಸಿರಬಾರದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗೆ 8 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ : ಅರ್ಜಿದಾರರು ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಂಗವಿಕಲ ಮತ್ತು ಮಾಜಿಸೈನಿಕ ಅಭ್ಯರ್ಥಿಗಳು 100 ರು. ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 600 ರು. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಈ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

click me!