ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನಿದ್ದು, ಮೇ.6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಬೆಂಗಳೂರು(ಎ.29): ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು (Indian Institute of Management Bangalore) ಖಾಲಿ ಇರುವ ವಿವಿಧ ಸಹಾಯಕ ವ್ಯವಸ್ಥಾಪಕ (Assistant Manager) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. , ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೇ.6ರ ಮೊದಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತರು ಅಧಿಕೃತ ವೆಬ್‌ತಾಣ https://www.iimb.ac.in/ ಗೆ ಭೇಟಿ ನಿಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಯಾವುದೇ ಪದವಿ ಪಡೆದಿದ್ದರೂ ಅರ್ಜಿ ಸಲ್ಲಿಸಬಹುದು. ಆದರೆ ಅಭ್ಯರ್ಥಿಗಳಿಗೆ ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಇರಬೇಕು.
ವಯೋಮಿತಿ: ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 60 ವರ್ಷ ನಿಗದಿಪಡಿಸಲಾಗಿದೆ. ವರ್ಗಾನುಸಾರ ವಯೋಮಿತಿ ಸಡಿಲಿಕೆ ಇದೆ.
CBSE FAKE NOTICE ಟರ್ಮ್ 2 ಪರೀಕ್ಷೆ ನಿಯಮಗಳ ಕುರಿತ ನಕಲಿ ಪೋಸ್ಟ್ ವೈರಲ್!
ಅರ್ಜಿ ಶುಲ್ಕ: ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ: ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳೀಗೆ ಮಾಸಿಕ ₹69,296 ವೇತನ ದೊರೆಯಲಿದೆ.
ONGC RECRUITMENT 2022: ಬರೋಬ್ಬರಿ 3614 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿವಿಧ 67ಹುದ್ದೆಗಳಿಗೆ ಯುಪಿಎಸ್‌ಸಿ ನೇಮಕಾತಿ: ಕೇಂದ್ರ ಲೋಕಸೇವಾ ಆಯೋಗ (Union Public Service Commission- UPSC) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಸಹಾಯಕ ರಸಾಯನಶಾಸ್ತ್ರಜ್ಞ (Assistant Chemist), ಜಿಯೋಫಿಸಿಸ್ಟ್ (Geophysicist) ಸೇರಿ ಒಟ್ಟು 67 ವಿವಿಧ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ.12 ಆಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ upsc.gov.in ಗೆ ಭೇಟಿ ನೀಡಲು ಕೋರಲಾಗಿದೆ. https://www.upsconline.nic.in/ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು.
ಸಹಾಯಕ ರಸಾಯನಶಾಸ್ತ್ರಜ್ಞ ಹುದ್ದೆಗೆ ಕೆಮಿಕಲ್ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮಾಡಿರಬೇಕು.
ಸಹಾಯಕ ಭೂಭೌತಶಾಸ್ತ್ರಜ್ಞ ಹುದ್ದೆಗೆ B.E, ಎಲೆಕ್ಟ್ರಾನಿಕ್ಸ್ ಅಥವಾ ಸಂವಹನದಲ್ಲಿ AMIE, ಸ್ನಾತಕೋತ್ತರ ಪದವಿ ಮಾಡಿರಬೇಕು.
ಸಹಾಯಕ ನಿರ್ದೇಶಕ ಹುದ್ದೆಗೆ ಪದವಿ, ಸ್ನಾತಕೋತ್ತರ ಪದವಿ ಮಾಡಿರಬೇಕು.
ಹಿರಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗೆ ಪದವಿ, ಸ್ನಾತಕೋತ್ತರ ಪದವಿ ಮಾಡಿರಬೇಕು.
ಹಿರಿಯ ಉಪನ್ಯಾಸಕರು (ಫೊರೆನ್ಸಿಕ್ ಮೆಡಿಸಿನ್) ಹುದ್ದೆಗೆ ಎಂ.ಡಿ ಮಾಡಿರಬೇಕು.
ಉಪ ವಿಭಾಗೀಯ ಇಂಜಿನಿಯರ್ ಹುದ್ದೆಗೆ ಸಿವಿಲ್ ಎಂಜಿನಿಯರಿಂಗ್ ಪದವಿ ಮಾಡಿರಬೇಕು.