
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಯಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಲು ಬಯಸುವ ದೇಶದ ಯುವಕರಿಗೆ ಸುವರ್ಣಾವಕಾಶ ಸಿಕ್ಕಿದೆ. ಬೆಂಗಳೂರಿನ ಯು ಆರ್ ರಾವ್ ಉಪಗ್ರಹ ಕೇಂದ್ರದಲ್ಲಿ (URSC) ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಪ್ರಕ್ರಿಯೆಯು ಆರಂಭವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನ್ಯಾಷನಲ್ ಅಪ್ರೆಂಟಿಸ್‌ಶಿಪ್ ಟ್ರೈನಿಂಗ್ ಸ್ಕೀಮ್ (NATS) ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 29, 2026 ಕೊನೆಯ ದಿನವಾಗಿದೆ. ಈ ನೇಮಕಾತಿಯಡಿ ಪದವೀಧರರು, ಡಿಪ್ಲೊಮಾ ಹೊಂದಿರುವವರು ಮತ್ತು ವಾಣಿಜ್ಯ (Commerce) ವಿದ್ಯಾರ್ಥಿಗಳಿಗೆ ಒಟ್ಟು 410 ಹುದ್ದೆಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಮಾಸಿಕ ಸ್ಟೈಪೆಂಡ್ (ವೇತನ) ಸಹ ನೀಡಲಾಗುತ್ತದೆ. ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ..
| ಅಪ್ರೆಂಟಿಸ್ ವರ್ಗ | ಹುದ್ದೆಗಳ ಸಂಖ್ಯೆ | ಮಾಸಿಕ ಸ್ಟೈಪೆಂಡ್ |
| ಗ್ರಾಜುಯೇಟ್ ಅಪ್ರೆಂಟಿಸ್ | 220 | ರೂ. 12,300 |
| ಟೆಕ್ನಿಷಿಯನ್ ಅಪ್ರೆಂಟಿಸ್ | 120 | ರೂ. 10,900 |
| ಕಮರ್ಷಿಯಲ್ ಅಪ್ರೆಂಟಿಸ್ | 70 | ರೂ. 10,900 |
ಅಪ್ರೆಂಟಿಸ್ ವರ್ಗ ಹುದ್ದೆಗಳ ಸಂಖ್ಯೆ ಮಾಸಿಕ ಸ್ಟೈಪೆಂಡ್ ಗ್ರಾಜುಯೇಟ್ ಅಪ್ರೆಂಟಿಸ್ (Graduate Apprentice) 220 ರೂ. 12,300 ಟೆಕ್ನಿಷಿಯನ್ ಅಪ್ರೆಂಟಿಸ್ (Technician Apprentice) 120 ರೂ. 10,900 ಕಮರ್ಷಿಯಲ್ ಅಪ್ರೆಂಟಿಸ್ (Commercial Apprentice) 70 ರೂ. 10,900
ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು
ಈ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಅಭ್ಯರ್ಥಿಗಳ ಶೈಕ್ಷಣಿಕ ಸಾಧನೆಯ (Academic Performance) ಆಧಾರದ ಮೇಲೆ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಪದವಿ ಅಥವಾ ಡಿಪ್ಲೊಮಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೊದಲಿಗೆ ಶಾರ್ಟ್‌ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳನ್ನು ಮುಂದಿನ ಹಂತವಾಗಿ ದಾಖಲೆ ಪರಿಶೀಲನೆಗೆ (Document Verification) ಕರೆಯಲಾಗುತ್ತದೆ. ದಾಖಲೆ ಪರಿಶೀಲನೆ ಪ್ರಕ್ರಿಯೆಗೆ ಹಾಜರಾಗಲು ಅಭ್ಯರ್ಥಿಗಳಿಗೆ ಯಾವುದೇ ಪ್ರಯಾಣ ಭತ್ಯೆ (Travelling Allowance) ನೀಡುವುದಿಲ್ಲ ಎಂಬುದನ್ನು ಅಭ್ಯರ್ಥಿಗಳು ಗಮನಿಸಬೇಕು.