ಎಲ್ಲಾ ಕ್ಷೇತ್ರದಲ್ಲೂ ಕನ್ನಡಿಗರಿಗೆ ಉದ್ಯೋಗ : ಬೊಮ್ಮಾಯಿ

By Kannadaprabha NewsFirst Published Nov 2, 2021, 6:17 AM IST
Highlights
  • ನಾಡಿನ ಯುವ ಜನರನ್ನು ಕೇಂದ್ರೀಕರಿಸಿ ಯೋಜನೆಗಳನ್ನು ರೂಪಿಸಲಾಗುತ್ತಿದೆ
  • ಕೈಗಾರಿಕಾ ವಲಯ ಸೇರಿ ಹಲವು ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ

 ಬೆಂಗಳೂರು (ಅ.02): ನಾಡಿನ ಯುವ ಜನರನ್ನು ಕೇಂದ್ರೀಕರಿಸಿ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಕೈಗಾರಿಕಾ (industry) ವಲಯ ಸೇರಿ ಹಲವು ಕ್ಷೇತ್ರದಲ್ಲಿ ಕನ್ನಡಿಗರಿಗೆ Kannadiga) ಉದ್ಯೋಗ (Job) ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು.

ಕನ್ನಡ ಚಳವಳಿ ವಾಟಾಳ್‌ (Vatal party) ಪಕ್ಷದಿಂದ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಮೈಸೂರು ಬ್ಯಾಂಕ್‌ (Mysuru Bank) ವೃತ್ತದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭುವನೇಶ್ವರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

`ಜನಸೇವಕ’ ಯೋಜನೆಗೆ ಸಿಎಂ ಚಾಲನೆ: ನಿಮ್ ಮನೆ ಬಾಗಿಲಿಗೆ ಇವೆಲ್ಲಾ ಸೌಲಭ್ಯಗಳು ಬರ್ತವೆ!

ಕನ್ನಡ ಭಾಷೆಗೆ  (Kannada )ಇರುವ ಅಗ್ರಮಾನ್ಯಸ್ಥಾನವನ್ನು ಉಳಿಸಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಆಡಳಿತ, ಬದುಕು, ಸಾಹಿತ್ಯ ಮತ್ತು ಸಂಸ್ಕೃತಿಯಲ್ಲಿ ಕನ್ನಡವನ್ನು ಉಳಿಸಲು ಶ್ರಮ ಪಡುವ ಅಗತ್ಯವಿದೆ. ಉನ್ನತ ಶಿಕ್ಷಣದಲ್ಲಿ (Education) ಕನ್ನಡಕ್ಕೆ ಸ್ಥಾನ ನೀಡುವ ಕಾರ್ಯ ಸಾಗಿದೆ. ಕನ್ನಡ ಮಾಧ್ಯಮದಲ್ಲೆ ತಾಂತ್ರಿಕ ಶಿಕ್ಷಣ ನೀಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಕನ್ನಡದಲ್ಲಿ ಶಿಕ್ಷಣ ನೀಡುವ ಕುರಿತಂತೆ ಹಲವು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಅವುಗಳು ಸರ್ಕಾರದ ಪರ ತೀರ್ಪು ಬರುವಂತೆ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಕರ್ನಾಟಕ (Karnataka) ಇಂದು ಹಲವಾರು ಕ್ಷೇತ್ರಗಳಲ್ಲಿ ಮುಂದಿದೆ. ಇನ್ನೂ ಕೆಲವು ಕ್ಷೇತ್ರದಲ್ಲಿ ಸಾಧನೆ ತೋರಬೇಕಾಗಿದೆ. ಕ್ಷೇತ್ರವಾರು, ಪ್ರಾದೇಶಿಕವಾರು ಅಸಮಾನತೆ ಹೋಗಲಾಡಿಸಬೇಕಾಗಿದೆ. ಕನ್ನಡ ನೆಲ, ಜಲವನ್ನು ಒಂದು ಧ್ವನಿಯಾಗಿ ರಕ್ಷಣೆ ಮಾಡಬೇಕಾಗಿದೆ. ನೈಸರ್ಗಿಕ ಸಂಪತ್ತನ್ನು ರಕ್ಷಿಸವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ. ನಾಡಿನ ಯುವ ಸಮೂಹಕ್ಕೆ ಸಮಕಾಲೀನ ಸವಾಲುಗಳನ್ನು ಎದುರಿಸುವಂತಹ ವಿದ್ಯೆ, ಸ್ಥಿರವಾದ ಉದ್ಯೋಗ ಮತ್ತು ಆರ್ಥಿಕ ಬದುಕು ಕೊಟ್ಟಲ್ಲಿ ಸಮೃದ್ಧ ಕರ್ನಾಟಕ ನಿರ್ಮಿಸಲು ಸಾಧ್ಯ ಎಂದರು.

ರಾಜ್ಯೋತ್ಸವ ಪ್ರಶಸ್ತಿ ಮೊತ್ತ ಹೆಚ್ಚಿಸಿದ ಸಿಎಂ, ಹಾಸ್ಯ ಚಟಾಕಿ ಹಾರಿಸಿದ ಪ್ರಾಣೇಶ್

ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪ ಅವರಿಗೆ ಮರಣೋತ್ತರ ‘ಭಾರತ ರತ್ನ’ ನೀಡಲು ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂಬ ವಾಟಾಳ್‌ ನಾಗರಾಜ್‌ ಅವರ ಮನವಿಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಈ ಸಂಬಂಧ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು. ಜೊತೆಗೆ, ಕೇಂದ್ರ ಗೃಹ ಸಚಿವರೊಂದಿಗೆ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ವಾಟಾಳ್‌ ನಾಗರಾಜ್‌, ಮಾಜಿ ಮುಖ್ಯಮಂತ್ರಿ ದಿವಂಗತ ನಿಜಲಿಂಗಪ್ಪನವರಿಗೆ ಭಾರತ ರತ್ನ ನೀಡಬೇಕು, ಅವರ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕು. ಅಲ್ಲದೆ, ಸೆಂಟ್ರಲ್‌ ಕಾಲೇಜಿನ ಆಟದ ಮೈದಾನದಲ್ಲಿ ಕರ್ನಾಟಕ ಏಕೀಕರಣ ನೆನಪಿಸುವ ಸಂಬಂಧ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ, ಆಡಳಿತಾಧಿಕಾರಿ ರಾಕೇಶ್‌ ಸಿಂಗ್‌ ಸೇರಿದಂತೆ ಕನ್ನಡ ಪರ ಹೋರಾಟಗಾರರು ಉಪಸ್ಥಿತರಿದ್ದರು.

ಮನೆ ಬಾಗಿಲಿಗೆ ಸೇವೆ

 

ಕನ್ನಡ ರಾಜ್ಯೋತ್ಸವ (kannada Rajyotsava 2021) ಹಿನ್ನೆಲೆಯಲ್ಲಿ ಇಂದು (ಸೋಮವಾರ) ವಿಧಾನಸೌಧದಲ್ಲಿ ಜನಸೇವಕ ಯೋಜನೆಗೆ (Janasevaka Scheme) ಸಿಎಂ ಬಸವರಾಜ ಬೊಮ್ಮಾಯಿ( Basavaraj Bommai) ಚಾಲನೆ ನೀಡಿದರು. 
ಜನ ಸ್ಪಂದನ ವೆಬ್​ ಪೋರ್ಟಲ್​ (Janaspandana Web Portal) ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆಯಾಗಿದೆ.

ಆಧಾರ್ ಕಾರ್ಡ್, ವಿಧವಾ ಪಿಂಚಣಿ, ವೃದ್ಧಾಪ್ಯ ವೇತನ ಸೇರಿದಂತೆ ಸರಕಾರದ ವಿವಿಧ ಇಲಾಖೆಗಳ 58 ಸೇವೆಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸುವ `ಜನ ಸೇವಕ’ ಕಾರ್ಯಕ್ರಮ ಇದಾಗಿದ್ದು, ನಗರದ ಪ್ಯಾಲೇಸ್ ಗುಟ್ಟಹಳ್ಳಿಯ 4 ಮತ್ತು 5ನೇ ಅಡ್ಡರಸ್ತೆಗಳಲ್ಲಿರುವ ಆಯ್ದ 10 ಮನೆಗಳಿಗೆ ಸ್ಥಳೀಯ ಶಾಸಕರೂ ಆದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರ ಜತೆ ತೆರಳಿದ ಮುಖ್ಯಮಂತ್ರಿಯವರು ವಿವಿಧ ಸೇವೆಗಳನ್ನು ಸಂಬಂಧಪಟ್ಟವರ ಮನೆಯೊಳಗೇ ಹೋಗಿ ತಲುಪಿಸಿದರು.

ಜನಸೇವಕ ಹೆಸರಿನಲ್ಲಿ ನಾಗರೀಕರ ಮನೆ ಬಾಗಿಲಿಗೆ ಸರ್ಕಾರದ ಸೇವೆ!

ಇದರಿಂದ ಸ್ಥಳೀಯ ಜನರು ಹರ್ಷಚಿತ್ತರಾದರು. ಮುಖ್ಯಮಂತ್ರಿ ಮತ್ತು ಸಚಿವರಿಗೆ ಪುಷ್ಪವೃಷ್ಟಿ ಮಾಡಿ ಸಂಭ್ರಮಿಸಿದರು. ಪ್ರತಿ ಮನೆಯ ಒಳಗೆ ಹೋಗಿ, ಅವರಿಗೆ ಆಧಾರ್‌ ಕಾರ್ಡ್‌, ಆರೋಗ್ಯ ಕಾರ್ಡ್‌, ಎಪಿಎಲ್‌ ಕಾರ್ಡ್‌ ನೀಡಿದರು. ನಿರ್ಮಾಣ ಹಂತದ ಕಟ್ಟಡದೊಳಗೆ ಹೋಗಿ ಅಲ್ಲಿದ್ದ ಕಾರ್ಮಿಕರಿಗೆ ಕಾರ್ಮಿಕರ ಕಾರ್ಡ್‌ ನೀಡಿದರು. ತಳ್ಳುವ ಗಾಡಿಯಲ್ಲಿ ಹೂವು ಮಾರಾಟ ಮಾಡುತ್ತಿದ್ದ ಮಹಿಳೆಗೆ ಆರೋಗ್ಯ ಕಾರ್ಡ್‌ ನೀಡಿದರು. ಮುಖ್ಯಮಂತ್ರಿಯೇ ಬಂದು ಈ ರೀತಿ ಸೇವೆ ಒದಗಿಸಿದ್ದು ನಿಜಕ್ಕೂ ಸಂತಸ ತಂದಿದೆ ಎಂದು ಎಲ್ಲರೂ ಧನ್ಯತೆ ಮೆರೆದರು.

click me!