ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಒಟ್ಟು 61 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ.
ಕಲಬುರಗಿ(ಮೇ.29): ಕಲಬುರಗಿಯಲ್ಲಿರುವ (Kalaburagi) ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (Central University of Karnataka)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಸೇರಿ ಒಟ್ಟು 61 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ. ಅರ್ಜಿಯನ್ನು ಆಫ್‌ಲೈನ್ ಮತ್ತು ಆನ್‌ಲೈನ್ 2 ವಿಧಾನಗಳಲ್ಲೂ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ವಿಶ್ವವಿವಿದ್ಯಾಲಯದ ಅಧಿಕೃತ ವೆಬ್‌ತಾಣ https://www.cuk.ac.in/#/home ಗೆ ಭೇಟಿ ನೀಡಬಹುದು.
ಒಟ್ಟು 61 ಹುದ್ದೆಗಳ ಮಾಹಿತಿ ಇಂತಿದೆ
ಪ್ರಾಧ್ಯಾಪಕ (Professor) : 21 ಹುದ್ದೆಗಳು
ಸಹ ಪ್ರಾಧ್ಯಾಪಕ (Associate Professor): 40 ಹುದ್ದೆಗಳು
undefined
NEET 2022; ಡಿಎಂಕೆ ವಿರೋಧದ ನಡುವೆಯೂ Tamil Nadu ಟಾಪ್ 3!
ಶೈಕ್ಷಣಿಕ ವಿದ್ಯಾರ್ಹತೆ: ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ CA/ICWA, B.Ed, ಪದವಿ, ಡಾಕ್ಟರಲ್ ಪದವಿ, M.Com, M.Ed, PGDM,MBA, ಕಲೆ/ಮಾನವೀಯತೆ/ವಿಜ್ಞಾನ/ಕಾಮರ್ಸ್‌ನಲ್ಲಿ ಸ್ನಾತಕೋತ್ತರ ಪದವಿ, ಕಲೆ/ಮಾನವೀಯತೆ/ ವಿಜ್ಞಾನ/ವಾಣಿಜ್ಯದಲ್ಲಿ ಸ್ನಾತಕೋತ್ತರ ಪದವಿ, ಪ್ರವಾಸೋದ್ಯಮ/ವ್ಯಾಪಾರ ಆಡಳಿತದಲ್ಲಿ M.Ed, MA, Ph.D ಪದವಿ, ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ: ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಕೇಂದ್ರಿಕ ವಿಶ್ವವಿದ್ಯಾಲಯ ನಿಯಮಗಳ ಪ್ರಕಾರ ವಯೋಮಿತಿ ನಿಗದಿಯಾಗಿದೆ.
Vijayanagara: ಹೊಸಪೇಟೆ ಸರ್ಕಾರಿ ಕಾಲೇಜಿನಲ್ಲಿ 3 ಕೋಟಿ ರೂಪಾಯಿ ಗುಳುಂ!
ಅರ್ಜಿ ಶುಲ್ಕ: ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಮತ್ತು ಹಿಂದುಳಿದ ಅಭ್ಯರ್ಥಿಗಳಿಗೆ ₹2,500, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ₹1000 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಈ ಹಿಂದಿನ ದಾಖಲಾ ಮೂಲಕ ಆಯ್ಕೆ ಮಾಡಲಾಗುತ್ತದೆ.
Karnataka Politics: ಸಿದ್ದು ದ್ರಾವಿಡರೇ ಅಥವಾ ಆರ್ಯರೇ?: ಸಿಎಂ ಬೊಮ್ಮಾಯಿ ಪ್ರಶ್ನೆ
ವೇತನ ವಿವರ: ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ಕೇಂದ್ರಿಕ ವಿಶ್ವವಿದ್ಯಾಲಯ ನಿಯಮ ಅನುಸಾರ 7 ನೇ ವೇತನ ಆಯೋಗದ ಪ್ರಕಾರ ವೇತನ ದೊರೆಯಲಿದೆ.
ಅಭ್ಯರ್ಥಿಗಳಿಗೆ ಅಗತ್ಯ ಸೂಚನೆ: ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡಿದ ಬಳಿಕ ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ ಜುಲೈ 8 ರೊಳಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ರಿಜಿಸ್ಟ್ರಾರ್,
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ,
ಕಡಗಂಚಿ, ಆಳಂದ ರಸ್ತೆ,
ಕಲಬುರಗಿ ಜಿಲ್ಲೆ - 585367