ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 6 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯು ಜಿಲ್ಲಾ ಉಪ ನಿರ್ದೇಶಕರಿಗೆ ಸೂಚಿಸಿದೆ.
ಬೆಂಗಳೂರು (ಜೂ.2): ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶಿಸಿದ್ದ ಬೆನ್ನಲ್ಲೇ ಇದೀಗ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 6 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯು ಜಿಲ್ಲಾ ಉಪ ನಿರ್ದೇಶಕರಿಗೆ ಸೂಚಿಸಿದೆ.
2023-24ನೇ ಸಾಲಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ, ಬಡ್ತಿ, ವರ್ಗಾವಣೆ ಮೂಲಕ ಭರ್ತಿ ಮಾಡುವವರಿಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 6 ಸಾವಿರ ಅತಿಥಿ ಶಿಕ್ಷಕರನ್ನು ಶಾಲಾ ಆರಂಭದ ದಿನದಿಂದಲೇ ನೇಮಕ ಮಾಡಿಕೊಳ್ಳುವಂತೆ ಸೂಚಿಸಿದೆ.
undefined
ಸಂಬಂಧಪಟ್ಟಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಮೂಲಕವೇ ನೇಮಕ ಮಾಡಿಕೊಳ್ಳುವುದು. ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಮೊದಲ ಆದ್ಯತೆಯಾಗಿ ನೇಮಕ ಮಾಡಿಕೊಳ್ಳಬೇಕು. ಗಣಿತ, ವಿಜ್ಞಾನ, ಇಂಗ್ಲಿಷ್ ವಿಷಯದ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆದ್ಯತೆಯಾಗಿ ಮತ್ತು ಇತರೆ ವಿಷಯಗಳಿಗೆ ನಂತರದ ಆದ್ಯತೆ ನೀಡುವಂತೆ ತಿಳಿಸಿದೆ. ಅತಿ ಹೆಚ್ಚು ಮಕ್ಕಳಿರುವ ಶಾಲೆಗಳಿಗೆ ಮೊದಲ ಆದ್ಯತೆಯಾಗಿ ಮೆರಿಟ್ ಆಧಾರದಲ್ಲಿ ನೇಮಕ ಮಾಡಿಕೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ:
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿರುವ ಪರಿಶಿಷ್ಟಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ 11 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 8 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿರುವಂತೆ ಗೌರವಧನ ಮಾಹೆಯಾನ 10 ಸಾವಿರ ರು. ನಿಗದಿಪಡಿಸಿದೆ. ಕಡ್ಡಾಯವಾಗಿ ಇಂಗ್ಲಿಷ್ ಐಚ್ಛಿಕ ವಿಷಯದಲ್ಲಿ ಡಿ.ಎಡ್ ಅಥವಾ ಬಿ.ಎಡ್ ಪೂರ್ಣಗೊಳಿಸಿದ ಅಭ್ಯರ್ಥಿಗಳಾಗಿರಬೇಕು. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿನ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಮಂಡಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ, ಜಿಲ್ಲಾ ಪಂಚಾಯಿತಿ ಕಟ್ಟಡ ಇಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-200500 ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ ತಿಳಿಸಿದ್ದಾರೆ.
NIT Karnataka Recruitment 2023: ರಾಜ್ಯದ ಏಕೈಕ ಎನ್‌ಐಟಿಯಲ್ಲಿ ಬೋಧಕ ಹುದ್ದೆಗಳಿಗೆ ಅರ್ಜಿ
ವಸತಿ ಶಾಲೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ಮರಳೂರು ಗ್ರಾಮದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ (ಹಿ.ವರ್ಗ) ಯಲ್ಲಿ ಖಾಲಿ ಇವರು ವಿಷಯಗಳ ಶಿಕ್ಷಕರ ಹುದ್ದೆಗಳಿಗೆ ಗೌರವಧನ ಆಧಾರದಲ್ಲಿ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂ.8 ಕೊನೆಯ ದಿನ. ಕನ್ನಡ ಭಾಷಾ ಶಿಕ್ಷಕ (ಐಚ್ಚಿಕ) ಬಿ.ಎ, ಬಿಇಡಿ, ಇಂಗ್ಲೀಷ್ ಭಾಷಾ ಶಿಕ್ಷಕ (ಐಚ್ಚಿಕ) ಬಿ.ಎ, ಬಿಇಡಿ, ಹಿಂದಿ ಭಾಷಾ ಶಿಕ್ಷಕ (ಐಚ್ಚಿಕ) ಬಿ.ಎ, ಬಿಇಡಿ, ಗಣಿತ (ಪಿ.ಎಂ) ಬಿ.ಎಸ್ಸಿ, ಬಿಇಡಿ, ಈ ಎಲ್ಲಾ ಹುದ್ದೆಗಳಿಗೆ ಟಿ.ಇ.ಟಿ ಕಡ್ಡಾಯ ಮತ್ತು ಸ್ನಾತಕೋತ್ತರ ಪದವಿ ಹಾಗೂ ಅನುಭವವುಳ್ಳ ಶಿಕ್ಷಕರಿಗೆ ಆದ್ಯತೆ ನೀಡಲಾಗುವುದು.
EUROPE DRIVER JOBS: ಯುರೋಪ್ ದೇಶದಲ್ಲಿ ಪುರುಷ, ಮಹಿಳಾ ಡ್ರೈವರ್‌ಗಳಿಗೆ ಅರ್ಜಿ ಆಹ್ವಾನ
ಅರ್ಹ ಹಾಗೂ ಆಸಕ್ತರು ಪ್ರಾಂಶುಪಾಲರು, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ (ಹಿ.ವರ್ಗ) ಮರಳೂರು, ಗೌರಿಬಿದನೂರು ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆ ಇವರ ಮೊ.ಸಂ:9343883501 ಗೆ ಸಂಪರ್ಕಿಸಬಹುದು.