ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗೆ ಕರ್ನಾಟಕ ಅರಣ್ಯ ಇಲಾಖೆ ಅರ್ಜಿ ಆಹ್ವಾನಿಸಿದೆ. 10ನೇ ಕ್ಲಾಸ್ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ, ಕೊನೆ ದಿನಾಂಕ, ಆಯ್ಕೆ ಮಾನದಂಡಗಳೇನು? ಇದರ ಕಂಪ್ಲೀಟ್ ಮಾಹಿತಿಗಾಗಿ ಮುಂದೆ ಓದಿ.
ಬೆಂಗಳೂರು, (ಫೆ.06): ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ (Forest Watcher)ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರಣ್ಯ ವೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 6-3-2019ರೊಳಗೆ ಅರ್ಜಿ ಸಲ್ಲಿಸಬಹುದು.
undefined
ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ 'B'ಹುದ್ದೆಗಳ ನೇಮಕಾತಿ
ಅರಣ್ಯ ವೀಕ್ಷಕ ಹುದ್ದೆಗಳಿಗೆ ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಸಾಮಾನ್ಯ ವರ್ಗ ಸೇರಿದಂತೆ ಜಾತಿವಾರು ಮೀಸಲಾತಿ ನೀಡಲಾಗಿದ್ದು, ಒಟ್ಟು 42 ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿ ಹಾಗೂ ಗರಿಷ್ಠ ವಯೋಮಿತಿ 30 ವರ್ಷಗಳನ್ನು ನಿಗದಿ ಮಾಡಲಾಗಿದೆ.
ಕರ್ನಾಟಕ ತೋಟಗಾರಿಕೆ ಇಲಾಖೆಯಲ್ಲಿ ನೇರ ನೇಮಕಾತಿ
ವಿದ್ಯಾರ್ಹತೆ: ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ : 18,600 ರಿಂದ 32,600 ರೂ. (ತಿಂಗಳಿಗೆ).
ಗ್ರಾಮಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಆಯ್ಕೆ ವಿಧಾನ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲಾತಿಗಳ ಪರಿಶೀಲನೆ, ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ