ನಿರುದ್ಯೋಗಿಗಳಿಗೆ ಗುಡ್‌ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ..!

By Suvarna NewsFirst Published Oct 3, 2020, 3:54 PM IST
Highlights

ಕೊರೋನಾ ಸಂಕಷ್ಟದಿಂದ ಉದ್ಯೋಗ ಕಳೆದುಕೊಂಡ ಮತ್ತು ಸ್ವ-ಉದ್ಯೋಗ ಮಾಡಲು ಇಚ್ಛಿಸುವ ಮಹಿಳೆಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನ ನೀಡಿದ್ದು, ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಬೆಂಗಳೂರು, (ಅ.03): ಕೊರೋನಾ ಸಂಕಷ್ಟದಿಂದ ಉದ್ಯೋಗ ಕಳೆದುಕೊಂಡ ಮತ್ತು ಸ್ವ-ಉದ್ಯೋಗ ಮಾಡಲು ಇಚ್ಛಿಸುವ ಮಹಿಳೆಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನ ನೀಡಿದ್ದು, ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ನಿರುದ್ಯೋಗಿ ಮಹಿಳೆಯರಿಗೆ ಸಹಾಯ ಮಾಡುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ 18 ವರ್ಷದಿಂದ 55 ವರ್ಷದೊಳಗೆ ವಯೋಮಿತಿ ಇರುವ ಆಸಕ್ತ ನಿರುದ್ಯೋಗಿ ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಜಾಬ್ಸ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸ್ವ ಉದ್ಯೋಗ ಕೈಗೊಳ್ಳಲು 3 ಲಕ್ಷಗಳವರೆಗೆ ಬ್ಯಾಂಕ್ ಸಾಲ ಮತ್ತು ನಿಗಮದಿಂದ ಎಸ್.ಸಿ ಹಾಗೂ ಎಸ್.ಟಿ ಮಹಿಳೆಯರಿಗೆ ಶೇಕಡ 50 ರಷ್ಟು ಸಾಲ ನೀಡಲಾಗುತ್ತೆ. ಇನ್ನು ಸಾಮಾನ್ಯ ವರ್ಗದ (ವಿಧವೆಯರು,ಸಂಕಷ್ಟಕ್ಕೊಳಗಾದ ಮಹಿಳೆಯರು, ಅಂಗವಿಕಲರು), ಮಹಿಳೆಯರಿಗೆ ಶೇಕಡ 30ರಷ್ಟು ಸಹಾಯಧನವನ್ನ ನೀಡಲಾಗುತ್ತೆ.

ಅಕ್ಟೋಬರ್ 1ರಿಂದ ಅರ್ಜಿ ಪ್ರಕ್ರಿಯೆ ಶುರುವಾಗಿದ್ದು, ಆಸಕ್ತ ಮಹಿಳೆಯರು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನ ಸಂರ್ಪಕಿಸಿ ಅರ್ಜಿ ಪಡೆದು ಅಕ್ಟೋಬರ್ 23ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಛೇರಿಯನ್ನ ಸಂರ್ಪಕಿಸಬಹುದು.

click me!