ಗ್ರೂಪ್ ಎ ಮತ್ತು ಬಿ ದರ್ಜೆಯ ಹುದ್ದೆಗೆ ಕೆಪಿಎಸ್‌ಸಿ ನಡೆಸುವ ಮುಖ್ಯಪರೀಕ್ಷೆಯಲ್ಲಿ ಐಚ್ಛಿಕ ವಿಷಯಗಳನ್ನು (ತಲಾ 250 ಅಂಕಗಳ 2 ಪತ್ರಿಕೆ) ಕೈಬಿಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಬೆಂಗಳೂರು [ಮಾ.13]: ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ (ಗ್ರೂಪ್ ‘ಎ’ ಮತ್ತು ‘ಬಿ’) ನೇಮಕಾತಿಗೆ ಕೆಪಿಎಸ್‌ಸಿ ನಡೆಸುವ ಮುಖ್ಯಪರೀಕ್ಷೆಯಲ್ಲಿ ಐಚ್ಛಿಕ ವಿಷಯಗಳನ್ನು (ತಲಾ 250 ಅಂಕಗಳ 2 ಪತ್ರಿಕೆ) ಕೈಬಿಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಈವರೆಗೂ ಐದು ಸಾಮಾನ್ಯ ಜ್ಞಾನ ಪತ್ರಿಕೆಗಳು (1250), ಒಂದು ಐಚ್ಛಿಕ ವಿಷಯ (ಎರಡು ಪತ್ರಿಕೆಗಳ 500 ಅಂಕ) ಸೇರಿ ಏಳು ಪತ್ರಿಕೆಗಳಿಗೆ ಉತ್ತರಿಸಬೇಕಾಗಿತ್ತು. ಆದರೆ, ಇದೀಗ ಐದು ಪತ್ರಿಕೆಗಳಿಗೆ ಮಾತ್ರ ಲಿಖಿತ ಪರೀಕ್ಷೆ ನಡೆಯಲಿದ್ದು, ಒಟ್ಟು 1250 ಅಂಕಗಳಿಗೆ ಉತ್ತರಿಸಬೇಕಾಗುತ್ತದೆ.
undefined
1279 ದ್ವಿತೀಯ ದರ್ಜೆ ಹುದ್ದೆ ಭರ್ತಿಗೆ KPSC ಅಧಿಸೂಚನೆ ಪ್ರಕಟ...
50 ಅಂಕಗಳಿಗೆ ಸಂದರ್ಶನ: ಈವರೆಗೆ 200 ಅಂಕಗಳಿಗೆ ನಡೆಯುತ್ತಿದ್ದ ವ್ಯಕ್ತಿತ್ವ ಪರೀಕ್ಷೆ ಯಲ್ಲಿ (ಸಂದರ್ಶನ) ಸಾಕಷ್ಟುಭ್ರಷ್ಟಾಚಾರ ನಡೆಯುತ್ತಿದ್ದು, 150 ಅಂಕಗಳನ್ನು ಕಡಿತಗೊಳಿಸಬೇಕು ಎಂದು ಆಗ್ರಹಗಳು ಕೇಳಿ ಬಂದಿದ್ದವು. ಈ ಅಂಶವನ್ನು ಪರಿಗಣಿಸಿರುವ ಸರ್ಕಾರ, ವ್ಯಕ್ತಿತ್ವ ಪರೀಕ್ಷೆಯನ್ನು 50 ಅಂಕಗಳಿಗೆ ನಡೆಸಲು ಸಂಪುಟ ತೀರ್ಮಾನಿಸಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಮೂಲಗಳು ತಿಳಿಸಿವೆ.