ಕರ್ನಾಟಕ ತೋಟಗಾರಿಕೆ ಇಲಾಖೆಯಲ್ಲಿ ನೇರ ನೇಮಕಾತಿ

By Web Desk  |  First Published Feb 2, 2019, 5:03 PM IST

ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕರ್ನಾಟಕ ತೋಟಗಾರಿಕೆ ಇಲಾಖೆ ಅರ್ಜಿ ಆಹ್ವಾನ! 72 ತೋಟಗಾರರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ!


ಬೆಂಗಳೂರು, (ಫೆ.02): ರಾಜ್ಯ ಉಳಿಕೆ ಮೂಲ ವೃಂದದಡಿ 72 ತೋಟಗಾರರ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ತೋಟಗಾರಿಕೆ ಇಲಾಖೆ ಅರ್ಜಿ ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮಾರ್ಚ್ 6. 2019ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು www.kar.nic.in ಮುಖಾಂತರ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

Tap to resize

Latest Videos

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17,000/- ರಿಂದ 28,950/-ರೂ (ತಿಂಗಳಿಗೆ) ವೇತನವನ್ನು ನೀಡಲಾಗುವುದು.

ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ  300 ರೂ.  ಪ್ರವರ್ಗ-2A,2B,3A,3Bಗೆ ಸೇರಿದ ಅಭ್ಯರ್ಥಿಗಳಿಗೆ 150ರೂ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಗ್ರಾಮಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ತೋಟಗಾರಿಕೆ ಇಲಾಖೆಯಿಂದ ನಡೆಸಲಾಗುವ ಹತ್ತು ತಿಂಗಳ ತರಬೇತಿ ಪಡೆದಿರಬೇಕು.

ಈ ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಇಲ್ಲಿ

click me!