ಮುಜರಾಯಿ ದೇಗುಲಗಳ ವಿವಿಧ ಖಾಲಿ ಹುದ್ದೆ ಶೀಘ್ರ ಭರ್ತಿ

By Suvarna NewsFirst Published Sep 16, 2021, 3:21 PM IST
Highlights
  • ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಶೀಘ್ರ ನೇಮಕಾತಿ
  • ಅರ್ಚಕ, ಸಹಾಯಕ ಅಚ೯ಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರ ಮುತಾಂದ ಹುದ್ದೆಗಳ ಭರ್ತಿ

ಬೆಂಗಳೂರು (ಸೆ.16) : ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅರ್ಚಕ, ಸಹಾಯಕ ಅಚ೯ಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರ ಮುತಾಂದ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಪ್ ಮತ್ತು ಹಜ್‍ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಬುಧವಾರ ಚಾಮರಾಜಪೇಟೆಯ ಹಿಂದೂ ದೇವಾಲಯಗಳ ಅಖಿಲ ಕನಾ೯ಟಕ ಅರ್ಚಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರು  ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವರಾದ ಡಾ. ಅಶ್ವತ್ಥ್ ನಾರಾಯಣ ನೇತೃತ್ವದಲ್ಲಿ ನಡೆಸದ ಸಭೆಯಲ್ಲಿ ಸಚಿವೆ   ಶಶಿಕಲಾ ಜೊಲ್ಲೆ ಭೇಟಿ ಮಾಡಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳನ್ನು ಕರೆಸಿ ಅವರೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ದೇವಸ್ಥಾನದ ಹೊರಾಂಗಣ ಮತ್ತು ಒಳಾಂಗಣಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. 

ಅಲ್ಲದೇ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇರುವ ತಾಂತ್ರಿಕ ತೊಡಕುಗಳನ್ನು ಬಗೆಹರಿಸಿ ಶೀಘ್ರವೇ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ, ಹಿಂದೂ ದೇವಾಲಯಗಳ ಅಖಿಲ ಕರ್ನಾಟಕ ಅರ್ಚಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರಿಗೆ  ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಆದಷ್ಟು ಶೀಘ್ರ ನಿಮ್ಮ ಸಮಸ್ಯೆ ಪರಿಹರಿಸಿ ಕೊಡುವುದಾಗಿ ಭರವಸೆ ನೀಡಿದರು.

click me!