
ಬೆಂಗಳೂರು: ಕರ್ನಾಟಕ ಗೃಹ ಮಂಡಳಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ನಗರ ಯೋಜನಾ ಆಯುಕ್ತಾಲಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 218 ಕಿರಿಯ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಸೂಚನೆ ಹೊರಡಿಸಿದೆ. ಉಳಿಕೆ ಮೂಲ ವೃಂದಕ್ಕೆ ಸೇರಿದ 187 ಹಾಗೂ ಕಲ್ಯಾಣ ಕರ್ನಾಟಕ ವೃಂದಕ್ಕೆ ಸೇರಿದ 31 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( ಕೆಇಎ )
ಹುದ್ದೆಗಳ ಸಂಖ್ಯೆ: 218
ಹುದ್ದೆಯ ಸ್ಥಳ: ಕರ್ನಾಟಕ
ಹುದ್ದೆಯ ಹೆಸರು: ಸಹಾಯಕ ಪಟ್ಟಣ ಯೋಜಕ, ಜೂನಿಯರ್ ಎಂಜಿನಿಯರ್
ಸಂಬಳ: ತಿಂಗಳಿಗೆ 54,175 – 99,400
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಬಿಇ/ಬಿಟೆಕ್, ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಯು 26-ನವೆಂಬರ್-2026 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 3 ವರ್ಷ
ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ.
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: ₹750
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿ: ₹500
PWD ಅಭ್ಯರ್ಥಿಗಳು: ₹250
ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), OMR ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭವಾದ ದಿನಾಂಕ: ಅಕ್ಟೋಬರ್ 31-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್-26-2026
ಶುಲ್ಕ ಪಾವತಿಸಲು ಕೊನೆಯ ದಿನಾಂಕ: ನವೆಂಬರ್-27-2026
ಅರ್ಜಿ ಸಲ್ಲಿಸಲು ನ.26 ಹಾಗೂ ಶುಲ್ಕ ಪಾವತಿಗೆ ನ.27 ಕೊನೆ ದಿನವಾಗಿದೆ. ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. 2027ರ ಜನವರಿಯಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್‌ಸೈಟ್ ವೀಕ್ಷಿಸಬಹುದು.
ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹಾಗೂ ಇತರ ಸಮಾನಾಂತರ 5,431 ಹುದ್ದೆಗಳ ನೇಮಕಾತಿಗೆ ಶುಕ್ರವಾರದಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಇದೇ ಮೊದಲ ಬಾರಿಗೆ ವಿವಿಧ ಹುದ್ದೆಗಳ ನೇಮಕಾತಿಗೂ ಒಂದೇ ಪರೀಕ್ಷೆಯ ನೂತನ ಉಪಕ್ರಮ ಅಳವಡಿಸಿಕೊಂಡಿದೆ.
ಇದುವರೆಗೂ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಇದ್ದಂತಹ ನೇಮಕಾತಿ ಪ್ರಾಧಿಕಾರದ ಮಾನ್ಯತೆಯನ್ನು ರಾಜ್ಯ ಸರ್ಕಾರ ಇತ್ತೀಚೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೂ ನೀಡಿದೆ. ಈ ಹಿನ್ನೆಲೆಯಲ್ಲಿ ಸಮಾನಾಂತರ ಶೈಕ್ಷಣಿಕ ಅರ್ಹತೆಯ ವಿವಿಧ ಇಲಾಖೆಗಳ ಹುದ್ದೆಗಳಿಗೆ ಒಮ್ಮೆಗೇ ಪರೀಕ್ಷೆ ನಡೆಸುವುದರ ಮೂಲಕ ನೇಮಕಾತಿ ಪ್ರಕ್ರಿಯೆ ಮುಗಿಸಲು ಕೆಇಎ ಹೊಸ ಹೆಜ್ಜೆ ಹಾಕಿದೆ. ಒಟ್ಟು 33 ಇಲಾಖೆಗಳ ವಿವಿಧ ಸಮಾನಾಂತರ ಹುದ್ದೆಗಳಿಗೆ ಒಮ್ಮೆಗೇ ಪರೀಕ್ಷೆ ನಡೆಸಿ, ತ್ವರಿತವಾಗಿ ನೇಮಕಾತಿ ನಡೆಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.