ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ಸಂಭಾವನೆ ಹೆಚ್ಚಳಕ್ಕೆ ಚಿಂತನೆ

By Kannadaprabha News  |  First Published Aug 16, 2021, 7:41 AM IST
  •  ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಿಸಲು ಕ್ರಮ
  • ಇಂಗ್ಲಿಷ್‌ ಹಾಗೂ ಗಣಿತ ವಿಷಯಗಳ ಅತಿಥಿ ಶಿಕ್ಷಕರ ನೇಮಕಕ್ಕೆ ಹೆಚ್ಚಿನ ಆದ್ಯತೆ 
  • ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿಕೆ

ಯಾದಗಿರಿ (ಆ.16): ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಇಂಗ್ಲಿಷ್‌ ಹಾಗೂ ಗಣಿತ ವಿಷಯಗಳ ಅತಿಥಿ ಶಿಕ್ಷಕರ ನೇಮಕಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

 ನಗರದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾದಗಿರಿ ಮತ್ತಿತರೆ ಜಿಲ್ಲೆಗಳಲ್ಲಿ ಈ ಬಗ್ಗೆ ಹೆಚ್ಚಿನ ಮಹತ್ವ ವಹಿಸಲಾಗುವುದು. ಅತಿಥಿ ಶಿಕ್ಷಕರ ಸಂಭಾವನೆ ಸೇರಿದಂತೆ ಒಂದಿಷ್ಟು ಬೇಡಿಕೆಗಳ ಬಗ್ಗೆಯೂ ಗಮನ ಹರಿಸಲಾಗುವುದು ಎಂದರು. 

Latest Videos

undefined

ಏರ್‌ಫೋರ್ಸ್‌ನಲ್ಲಿ ಗ್ರೂಪ್ ‘ಸಿ’ ನಾಗರಿಕ 282 ಹುದ್ದೆಗಳಿಗೆ ನೇಮಕಾತಿ

ಸಿಇಟಿ ಹಾಗೂ ಟಿಇಟಿ ಪರೀಕ್ಷೆಗಳಲ್ಲಿನ ಮಾನದಂಡಗಳಲ್ಲಿ ಏರಿಕೆಯಿದ್ದರಿಂದ ಈ ಭಾಗದಲ್ಲಿ ಶಿಕ್ಷಕರ ಕೊರತೆ ಕಾಡುತ್ತಿದೆ. ಬೇರೆ ಜಿಲ್ಲೆಯಿಂದ ನೇಮಕಾತಿಗೊಂಡವರು ಇಲ್ಲಿಗೆ ಬಂದು ವರ್ಗಾವಣೆಗೊಳ್ಳುವುದು ಶಿಕ್ಷಣ ಇಲಾಖೆಯಲ್ಲಷ್ಟೇ ಅಲ್ಲ, ಆರೋಗ್ಯ ಸೇರಿದಂತೆ ಕೆಲವೊಂದು ಇಲಾಖೆಗಳನ್ನೂ ಇದೆ. ಈಗ ಈ ಭಾಗದ ಕೊರತೆ ನೀಗಿಸಲು ಇಲ್ಲಿಗನುಗುಣವಾಗಿ ಶಿಕ್ಷಕರ ನೇಮಕಕ್ಕೆ ಸಿಇಟಿ, ಟಿಇಟಿ ನಡೆಸುವ ಇರಾದೆಯಿದೆ ಎಂದರು.

click me!