MRPL ನೇಮಕಾತಿ: 16 ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, 14 ಲಕ್ಷದವರೆಗೆ ಸಂಬಳ!

Published : Oct 01, 2026, 02:35 PM IST
MRPL

ಸಾರಾಂಶ

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) 16 ಎಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ₹12 ರಿಂದ 14 ಲಕ್ಷದವರೆಗೆ ವೇತನ ದೊರೆಯಲಿದ್ದು, ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿದೆ. ಆಸಕ್ತರು ಅಕ್ಟೋಬರ್ 29, 2026 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಸಂಪೂರ್ಣ ವಿವರ:

ಸಂಸ್ಥೆಯ ಹೆಸರು: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ( MRPL )

ಹುದ್ದೆಗಳ ಸಂಖ್ಯೆ: 16

ಉದ್ಯೋಗ ಸ್ಥಳ: ಮಂಗಳೂರು – ಕರ್ನಾಟಕ

ಹುದ್ದೆಯ ಹೆಸರು: ಎಂಜಿನಿಯರ್

ಸಂಬಳ: ವಾರ್ಷಿಕ ₹12,00,000–14,00,000

ವಯೋಮಿತಿ:

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷಗಳು.

ವಯೋಮಿತಿ ಸಡಿಲಿಕೆ:

ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ

ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ: 05 ವರ್ಷ

ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: 118 ರು.

ಎಸ್‌ಸಿ/ಎಸ್‌ಟಿ/\Bಪಿಡಬ್ಲ್ಯೂಬಿಡಿ\B/ಮಾಜಿ ಸೈನಿಕ ಅಭ್ಯರ್ಥಿಗಳು: ಯಾವುದೇ ಶುಲ್ಕ ಇಲ್ಲ.

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:

ಅರ್ಜಿಗಳ ಪರಿಶೀಲನೆ

ವೈಯಕ್ತಿಕ ಸಂದರ್ಶನ (PI)

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲನೆಯದಾಗಿ MRPL ನೇಮಕಾತಿ ಅಧಿಸೂಚನೆ 2026 ಅನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

MRPL ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆವಾದ ದಿನಾಂಕ: ಸೆಪ್ಟೆಂಬರ್‌ 30-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್-29-2026

PREV
Read more Articles on
click me!

Recommended Stories

ಬಿಎಲ್‌ಎಸ್ ಇಂಟರ್‌ನ್ಯಾಷನಲ್‌ಗೆ 'ಗ್ರೇಟ್ ಪ್ಲೇಸ್ ಟು ವರ್ಕ್' ಗೌರವ, ಶೇ. 95ರಷ್ಟು ಉದ್ಯೋಗಿಗಳಿಂದ ಫುಲ್ ಮಾರ್ಕ್ಸ್
ಯಾವ ಕೋರ್ಸ್ ಕಲಿಯಬೇಕು? 20 ವರ್ಷದ ಯುವ ಸಮೂಹಕ್ಕೆ ಎಲಾನ್ ಮಸ್ಕ್ ಅದ್ಭುತ ಟಿಪ್ಸ್