
ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ NHPC ಲಿಮಿಟೆಡ್ (National Hydroelectric Power Corporation) ಸಂಸ್ಥೆಯು 205 ಟ್ರೈನಿ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಹಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಜಲ ವಿದ್ಯುತ್ ನಿಗಮ ಲಿಮಿಟೆಡ್
ಹುದ್ದೆಯ ಹೆಸರು: ಟ್ರೈನಿ ಎಂಜಿನಿಯರ್
ಒಟ್ಟು ಹುದ್ದೆಗಳು: 205
ಉದ್ಯೋಗ ಸ್ಥಳ: ಅಖಿಲ ಭಾರತ
ಮಾಸಿಕ ವೇತನ: ₹50,000–₹1,60,000
ಹುದ್ದೆಯ ಹೆಸರು: ಹುದ್ದೆಗಳ ಸಂಖ್ಯೆ
ಟ್ರೈನಿ ಎಂಜಿನಿಯರ್ (ಸಿವಿಲ್): 64
ಟ್ರೈನಿ ಎಂಜಿನಿಯರ್ (ಎಲೆಕ್ಟ್ರಿಕಲ್): 88
ಟ್ರೈನಿ ಎಂಜಿನಿಯರ್ (ಮೆಕ್ಯಾನಿಕಲ್): 53
ಒಟ್ಟು: 205
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.Sc, BE/B.Tech ಪದವಿ ಮುಗಿಸರಬೇಕು.
ವಯೋಮಿತಿ
ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 30 ವರ್ಷಗಳು ಹೊಂದಿರಬೇಕು.
ಅಭ್ಯರ್ಥಿಗಳ ವರ್ಗ: ಅರ್ಜಿ ಶುಲ್ಕ
ಯುಆರ್/ ಇಡಬ್ಲ್ಯೂಎಸ್/ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ: ₹708
ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ/ಮಹಿಳೆಯರು/ಮಾಜಿ ಸೈನಿಕರು ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕ ಇಲ್ಲ.
ಗೇಟ್-2025 / ಗೇಟ್-2026 ಅಂಕಗಳು (ಅತ್ಯುತ್ತಮ ಅಂಕ)
ಗುಂಪು ಚರ್ಚೆ
ವೈಯಕ್ತಿಕ ಸಂದರ್ಶನ
- ಮೊದಲಿಗೆ NHPC ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
-ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ನಿಮ್ಮ ವಿದ್ಯಾರ್ಹತೆ ಮತ್ತು ವಯೋಮಿತಿ ಸರಿಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ.
- ಆನ್‌ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಗತ್ಯವಿರುವ ವೈಯಕ್ತಿಕ ಮತ್ತು ಶೈಕ್ಷಣಿಕ ಮಾಹಿತಿಯನ್ನು ಭರ್ತಿ ಮಾಡಿ.
- ಅಗತ್ಯ ದಾಖಲೆಗಳು, ಭಾವಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ.
ಅರ್ಜಿ ಆರಂಭ ದಿನಾಂಕ: ನವೆಂಬರ್ 27-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 26-2026