Nimhans Recruitment 2022: ಹಿರಿಯ ಸಂಶೋಧನಾ ​ ಫೆಲೋ ಸೇರಿ 4 ಹುದ್ದೆಗಳಿಗೆ ನೇಮಕಾತಿ

By Suvarna News  |  First Published May 7, 2022, 12:56 PM IST

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ 4 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಮೇ.21 ಕೊನೆಯ ದಿನವಾಗಿದೆ. 


ಬೆಂಗಳೂರು (ಮೇ.7): ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು (National Institute of Mental Health and Neuro Sciences) ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಸೀನಿಯರ್ ರಿಸರ್ಚ್​​ ಫೆಲೋ (Senior Research Fellow) ಮತ್ತು ಪ್ರಾಜೆಕ್ಟ್​ ಅಸೋಸಿಯೇಟ್ (Project Associate) ಸೇರಿ ಒಟ್ಟು 4 ಹುದ್ದೆ ಖಾಲಿ ಇದ್ದು, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಮೇ.21 ಈ ಮೇಲ್  ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು nimhans.ac.in ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಒಟ್ಟು 4ಹುದ್ದೆಗಳ ಮಾಹಿತಿ ಇಂತಿದೆ:
ಹಿರಿಯ ಸಂಶೋಧನಾ ​ ಫೆಲೋ: 2 ಹುದ್ದೆಗಳು
ಯೋಜನಾ ಸಹಾಯಕ: 2 ಹುದ್ದೆಗಳು

Tap to resize

Latest Videos

ಶೈಕ್ಷಣಿಕ ವಿದ್ಯಾರ್ಹತೆ: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ  ಹಿರಿಯ ಸಂಶೋಧನಾ ​ ಫೆಲೋ ಮತ್ತು  ಯೋಜನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಆಯಾಯ  ಹುದ್ದೆಗೆ ಸಂಬಂಧಿಸಿ   ಸ್ನಾತಕೋತ್ತರ ಪದವಿ ಪಡೆದಿರಬೇಕು. 

ಹಿರಿಯ ಸಂಶೋಧನಾ ​ ಫೆಲೋ ಹುದ್ದೆಗೆ  ಬಿಎಎಂಎಸ್ ಮಾಡಿರಬೇಕು. ಮತ್ತು  ಯೋಜನಾ ಸಹಾಯಕ ಹುದ್ದೆಗಳಿಗೆ (ಲೈಫ್ ಸೈನ್ಸ್ ಮತ್ತು ಯೋಗ) ಬಿ.ಟೆಕ್, ಸ್ನಾತಕೋತ್ತರ ಪದವಿ , BNYS, MBBS, BAMS, ಸ್ನಾತಕೋತ್ತರ ಡಿಪ್ಲೊಮಾ, M.Sc ಮಾಡಿರಬೇಕು.

ಕೆಲಸದ ಅನುಭವ: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ    ಹಿರಿಯ ಸಂಶೋಧನಾ ಫೆಲೋಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವವರು 2 ವರ್ಷಗಳ ಸಂಶೋಧನಾ ಅನುಭವವನ್ನು ಹೊಂದಿರಬೇಕು. ಮತ್ತು ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 1 ವರ್ಷದ ಸಂಶೋಧನಾ ಅನುಭವ ಹೊಂದಿರಬೇಕು.

ವಯೋಮಿತಿ: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ    ಹಿರಿಯ ಸಂಶೋಧನಾ ಫೆಲೋಶಿಪ್ ಮತ್ತು ಯೋಜನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 35 ವರ್ಷದ ಒಳಗಿರಬೇಕು. ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:  ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ    ಹಿರಿಯ ಸಂಶೋಧನಾ ಫೆಲೋಶಿಪ್ ಮತ್ತು ಯೋಜನಾ ಸಹಾಯಕ ಹುದ್ದೆಗಳಿಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ    ಹಿರಿಯ ಸಂಶೋಧನಾ ಫೆಲೋಶಿಪ್ ಮತ್ತು ಯೋಜನಾ ಸಹಾಯಕ ಹುದ್ದೆಗಳಿಗೆ  ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ಮಾಸಿಕ ವೇತನ ದೊರೆಯಲಿದೆ.
ಹಿರಿಯ ಸಂಶೋಧನಾ ಫೆಲೋ ಹುದ್ದೆಗೆ ₹35000
ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ₹ 25000 ರಿಂದ ₹31000 ವೇತನ ದೊರೆಯಲಿದೆ.

ಅರ್ಜಿ ಸಲ್ಲಿಸಬೇಕಾದ ಈ ಮೇಲ್ ವಿಳಾಸ: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ    ಹಿರಿಯ ಸಂಶೋಧನಾ ಫೆಲೋಶಿಪ್ ಮತ್ತು ಯೋಜನಾ ಸಹಾಯಕ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ  imd.nimhans@gmail.com ಗೆ ಮೇ.21ರ ಮೊದಲು ಅರ್ಜಿ ಸಲ್ಲಿಸಬೇಕು.

click me!