ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಒಟ್ಟು 922 ನಾನ್ ಎಕ್ಸಿಕ್ಯೂಟಿವ್ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಮೇ 28, 2022ರವೆಗೂ ಅವಕಾಶವಿದೆ.
ಬೆಂಗಳೂರು(ಮೇ.9): ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್ ಲಿಮಿಟೆಡ್ (Oil and Natural Gas Corporation Limited-ONGC) ನಲ್ಲಿ ಖಾಲಿ ಇರುವ ಒಟ್ಟು 922 ನಾನ್ ಎಕ್ಸಿಕ್ಯೂಟಿವ್ ( Non-Executive) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 15, 2022ರವೆಗೂ ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಇಲಾಖೆ ಅಧಿಕೃತ ವೆಬ್‌ತಾಣ ongcindia.com ಗೆ ಭೇಟಿ ನೀಡಲು ಕೋರಲಾಗಿದೆ.
ವಿದ್ಯಾರ್ಹತೆ : ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಅಭ್ಯರ್ಥಿಗಳು ಸ್ಟೇಟ್ ಬೋರ್ಡ್ ಆಫ್ ಟೆಕ್ನಿಕಲ್ ಎಜುಕೇಶನ್ (SBTE)/ನ್ಯಾಷನಲ್ ಕೌನ್ಸಿಲ್ ಫಾರ್ ವೊಕೇಶನಲ್ ಟ್ರೈನಿಂಗ್ (NCVT) ನಿಂದ ಅನುಮೋದಿಸಲಾದ ITI/ತಾಂತ್ರಿಕ ಸಂಸ್ಥೆಯಲ್ಲಿ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ : ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 24 ವರ್ಷದ ಒಳಗಿರಬೇಕು. SC/ST, OBC-NC/Ex-Servicemen/PwBD ವರ್ಗದವರಿಗೆ ಸರಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.
HAL Recruitment 2022: ಭದ್ರತಾ ಅಧಿಕಾರಿ ಸೇರಿ ವಿವಿಧ ಹುದ್ದೆಗಳಿಗೆ HAL ನೇಮಕಾತಿ
ಅರ್ಜಿ ಶುಲ್ಕ: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ /OBC/ EWS ಅಭ್ಯರ್ಥಿಗಳು ₹300 ಅರ್ಜಿ ಶುಲ್ಕ ಪಾವತಿಸಬೇಕು. SC/ST/PWBD ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಸ್ಕಿಲ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ಮಾಸಿಕ ₹24,000 ರಿಂದ ₹98,000 ರವರೆಗೆ ವೇತನ ದೊರೆಯಲಿದೆ.
NIMHANS RECRUITMENT 2022: ಹಿರಿಯ ಸಂಶೋಧನಾ ಫೆಲೋ ಸೇರಿ 4 ಹುದ್ದೆಗಳಿಗೆ ನೇಮಕಾತಿ
ಬರೋಬ್ಬರಿ 3614 ಅಪ್ರೆಂಟಿಸ್ ಹುದ್ದೆಗಳಿಗೆ ONGC ಅರ್ಜಿ ಆಹ್ವಾನ: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್ ಲಿಮಿಟೆಡ್ (Oil and Natural Gas Corporation Limited-ONGC) ನಲ್ಲಿ ಖಾಲಿ ಇರುವ ಒಟ್ಟು 3614 ಅಪ್ರೆಂಟಿಸ್ ( Apprentice) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 15, 2022ರವೆಗೂ ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಇಲಾಖೆ ಅಧಿಕೃತ ವೆಬ್‌ತಾಣ ongcindia.com ಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ಬಿಎ / ಬಿ.ಕಾಮ್ /ಬಿಎಸ್ಸಿ / ಬಿಬಿಎ / ಬಿಇ ಪದವಿ, ಡಿಪ್ಲೊಮಾ ಮತ್ತು ಐಟಿಐ ಮಾಡಿರಬೇಕು.
ವಯೋಮಿತಿ : ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 24 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, PWBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.