ರಾಯಚೂರು ಜಿಲ್ಲಾ ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಇದರ ಇನ್ನಷ್ಟು ಮಾಹಿತಿ ಈ ಕೆಳಹಿನಂತಿದೆ.
ಬೆಂಗಳೂರು, (ಜ.25): ರಾಯಚೂರು ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಟ್ಟು 51 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿಗಳನ್ನು ಸಲ್ಲಿಸಲು 22/2/2019 ಕೊನೆಯ ದಿನವಾಗಿದೆ.
ಭಾರತೀಯ ಪಶ್ಚಿಮ ರೈಲ್ವೆ ಇಲಾಖೆಯಲ್ಲಿ 1944 ಹುದ್ದೆಗಳಿಗೆ ಅರ್ಜಿ ಆಹ್ವಾನ
ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಪ್ರತ್ಯೇಕವಾಗಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ.
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ 150 ರೂ., ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.
ವಿವಿಧ ಹುದ್ದೆಗಳ ನೇಮಕಾತಿಗೆ UPSC ಅರ್ಜಿ ಆಹ್ವಾನ
ವಿದ್ಯಾರ್ಹತೆ : ಪಿಯುಸಿ ಪರೀಕ್ಷೆ ಅಥವ ಸಿಬಿಎಸ್‌ಇ ಅಥವ ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಈ ವಿದ್ಯಾರ್ಹತೆ ಹೊರತುಪಡಿಸಿ ಯಾವುದೇ ತತ್ಸಮಾನ ವಿದ್ಯಾರ್ಹತೆ ಪರಿಗಣನೆಗೆ ಇರುವುದಿಲ್ಲ.
ವಯೋಮಿತಿ : 22/2/2019ಕ್ಕೆ ಅನ್ವಯವಾಗುವಂತೆ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 40. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಸಾಮಾನ್ಯ ವರ್ಗದವರಿಗೆ 35 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ.
ವೇತನ ಶ್ರೇಣಿ: 21400 ರಿಂದ 42000 [ತಿಂಗಳಿಗೆ]
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ