ಉಚಿತ ಊಟ, ವಸತಿಯೊಂದಿಗೆ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ; ಜು.02 ಕೊನೆ ದಿನ

By Sathish Kumar KHFirst Published Jun 24, 2024, 6:46 PM IST
Highlights

ಊಟ, ವಸತಿಯೊಂದಿಗೆ ಉಚಿತ ಕೋಳಿ ಸಾಕಾಣಿಕೆ ತರಬೇತಿ ನೀಡುವುದಕ್ಕೆ ಅರ್ಹ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು (ಜೂ.24): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಗೆ  ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ಗಳನ್ನು  ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ  ಸೌಲಭ್ಯ ನೀಡಲಾಗುವುದು. ಜೊತೆಗೆ, ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜುಲೈ 02 ಕೊನೆಯ ದಿನವಾಗಿದೆ.

Latest Videos

ಯುಜಿಸಿಇಟಿ-2024: ಅಭ್ಯರ್ಥಿಗಳ ದಾಖಲೆಗಳ ಆಫ್ ಲೈನ್ ಪರಿಶೀಲನೆ ಜೂ.25ರಿಂದ ಆರಂಭ

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಶಾಖೆ, ರುಡ್ಸೆಟ್ ಸಂಸ್ಥೆಯ  ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಾನಂತರ ಖಾತರಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಬೆಂಗಳೂರು ನಗರ ಜಿಲ್ಲೆ:
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ  ಆಯವ್ಯಯ ಕಂಡಿಕೆ -144 ಘೋಷಣೆಯನ್ವಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳು ಪಡೆಯುವ  ಸಾಲಕ್ಕೆ ರೂ.2.00 ಕೋಟಿಗಳವರೆಗೆ ಸಮಾನಂತರ ಖಾತರಿ ನೀಡುವ ಯೋಜನೆಯನ್ನು ಕೆ.ಎಸ್.ಎಫ್.ಸಿ ಮಾದರಿಯಲ್ಲಿ ರಾಷ್ಟ್ರೀಕೃತ ಬ್ಯಾಂಕಗಳೂ / ಆರ್.ಆರ್.ಬಿ ಬ್ಯಾಂಕ್ ಗಳಿಗೆ  ಸರ್ಕಾರವು 2023ರ ನವೆಂಬರ್ 18ರಲ್ಲಿ ವಿಸ್ತರಿಸಿ ಆದೇಶಿಸಲಾಗಿರುತ್ತದೆ . ಆದರಂತೆ,  ಈ ಯೋಜನೆಯು ಉಪಯೋಗವನ್ನು ಪಡೆಯಲು ಇಚ್ಛಿಸುವ ಫಲಾನುಭಾವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದಲ್ಲಿ ಅದ್ಧೂರಿ ಕೆಂಪೇಗೌಡರ ದಿನಾಚರಣೆಗೆ ಬಿಬಿಎಂಪಿಯಿಂದ 2.40 ಕೋಟಿ ರೂ. ಖರ್ಚು ಮಾಡಿಸುತ್ತಿರುವ ಸರ್ಕಾರ!

ಆಸಕ್ತರು ಅರ್ಜಿಗಳನ್ನು ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1, 1ನೇ ಮಹಡಿ, ಜೆಲ್ಲೇಟಾ ಟವರ್ಸ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು -57 ಇಲ್ಲಿಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

click me!