SECR Apprentice Recruitment 2022 ರೈಲ್ವೆ ಇಲಾಖೆ ಸೇರ ಬಯಸುವವರಿಗೆ ಸುವರ್ಣಾವಕಾಶ

By Suvarna NewsFirst Published May 4, 2022, 11:30 AM IST
Highlights

ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು  ಅರ್ಜಿ ಆಹ್ವಾನಿಸಲಾಗಿದೆ.  ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 24, 2022 ಕೊನೆಯ ದಿನವಾಗಿದೆ. 

ಬೆಂಗಳೂರು (ಮೇ.4): ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶವೊಂದು ಒಲಿದು ಬಂದಿದೆ. ಆಗ್ನೇಯ ಮಧ್ಯ ರೈಲ್ವೆ (South East Central Railway -SECR ) ಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಅರ್ಹ ಅಭ್ಯರ್ಥಿಗಳು apprenticeshipindia.org ನಲ್ಲಿ ಅಪ್ರೆಂಟಿಸ್‌ಶಿಪ್ ಇಂಡಿಯಾದ ಅಧಿಕೃತ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.   ಒಟ್ಟು  1,033   ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 24, 2022 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ತಾಣ https://secr.indianrailways.gov.in/ ಗೆ ಭೇಟಿ ನೀಡಬಹುದು.

ಹುದ್ದೆಗಳ ಮಾಹಿತಿ: ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳ ಮಾಹಿತಿ ಇಂತಿದೆ.
DRM ಕಚೇರಿ, ರಾಯ್‌ಪುರ ವಿಭಾಗಕ್ಕೆ  696 ಹುದ್ದೆಗಳು ನಿಗದಿಯಾಗಿದೆ. ಅದರಲ್ಲಿ 
ವೆಲ್ಡರ್ ಗ್ಯಾಸ್ ಮತ್ತು ಎಲೆಕ್ಟ್ರಿಕ್ - 119
ಟರ್ನರ್ - 76
ಫಿಟ್ಟರ್ - 198
ಎಲೆಕ್ಟ್ರಿಷಿಯನ್ - 154
ಸ್ಟೆನೋಗ್ರಾಫರ್ (ಇಂಗ್ಲಿಷ್) -10
ಸ್ಟೆನೋಗ್ರಾಫರ್ (ಹಿಂದಿ) - 10
ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಂ ಸಹಾಯಕ - 10
ಆರೋಗ್ಯ ಮತ್ತು ನೈರ್ಮಲ್ಯ ನಿರೀಕ್ಷಕರು - 17
ಯಂತ್ರಶಾಸ್ತ್ರಜ್ಞ - 30
ಮೆಕ್ಯಾನಿಕ್ ಡೀಸೆಲ್ - 30
ಮೆಕ್ಯಾನಿಕ್ ರಿಪೇರಿ ಮತ್ತು ಏರ್ ಕಂಡಿಷನರ್, 12
ಮೆಕ್ಯಾನಿಕ್ ಮತ್ತು ಆಟೋ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ -30

ವ್ಯಾಗನ್ ರಿಪೇರಿ ಶಾಪ್, ರಾಯ್‌ಪುರ ವಿಭಾಗಕ್ಕೆ 337 ಹುದ್ದೆಗಳನ್ನು ಮೀಸಲಿಡಲಾಗಿದೆ. ಅದರಂತೆ 
ವೆಲ್ಡರ್ - 140
ಟರ್ನರ್ - 15
ಫಿಟ್ಟರ್ - 140
ಎಲೆಕ್ಟ್ರಿಷಿಯನ್ - 15
ಮೆಕ್ಯಾನಿಸ್ಟ್ -20
ಸ್ಟೆನೋಗ್ರಾಫರ್ (ಹಿಂದಿ) - 2
ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಂ ಸಹಾಯಕ - 5

PSI RECRUITMENT SCAM ಪಿಎಸ್‌ಐ ಹುದ್ದೆಗಳ ಭರ್ತಿಗೆ ಎಎಸ್‌ಐಗಳಿಗೆ ಬಡ್ತಿ

ಶೈಕ್ಷಣಿಕ ವಿದ್ಯಾರ್ಹತೆ: ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮತ್ತು ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು.  ಅದರಂತೆ 10 ನೇ ತರಗತಿ, ಕನಿಷ್ಠ ಶೇ.55 ಅಂಕಗಳೊಂದಿಗೆ  ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು ಜೊತೆಗೆ ವ್ಯಾಪಾರ ವಿಷಯದಲ್ಲಿ ಐಟಿಐ ಮಾಡಿರಬೇಕು.

ವಯೋಮಿತಿ: ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 15 ರಿಂದ 24 ವರ್ಷದ ಒಳಗಿರಬೇಕು.

ಆಯ್ಕೆ  ಪ್ರಕ್ರಿಯೆ:  ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು  ಮೆಟ್ರಿಕ್ಯುಲೇಷನ್ ಎರಡರಲ್ಲೂ  ಪಡೆದಿರುವ  ಶೇ.ವಾರು ಅಂಕಗಳ ಸರಕಾರಿಯನ್ನು ತೆಗೆದುಕೊಂಡು ಮೆರಿಟ್ ಆಧಾರದಲ್ಲಿ ಆಯ್ಕೆ ಪಟ್ಟಿ  ಮಾಡಲಾಗುತ್ತದೆ. 

India Post Office Recruitment 2022: ಬರೋಬ್ಬರಿ 38,926 ಹುದ್ದೆಗಳಿಗೆ ನೇಮಕಾತಿ 

 ಬರೋಬ್ಬರಿ 38,926 ಹುದ್ದೆಗಳಿಗೆ ನೇಮಕಾತಿ: ಭಾರತೀಯ ಅಂಚೆ ಇಲಾಖೆ (India Post Office) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ದೇಶದಾದ್ಯಂತ ಬರೋಬ್ಬರಿ  38,926  ಗ್ರಾಮೀಣ ಅಂಚೆ ಸೇವಕ (  Gramin Dak Sevaks ) ಹುದ್ದೆಗಳು ಖಾಲಿ ಇದ್ದು, ಇದರಲ್ಲಿ  ಬಿಪಿಎಂ (Branch Postmaster), ಎಬಿಪಿಎಂ (Assistant Branch Postmaster) ಅಂಚೆ ಸೇವಕ (Dak Sevak) ಹುದ್ದೆಗಳು ಸೇರಿವೆ. ಕರ್ನಾಟಕದಲ್ಲಿ 2410 ಹುದ್ದೆಗಳು ಖಾಲಿ ಇದೆ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಜೂನ್ 5 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು https://indiapostgdsonline.gov.in/ ಗೆ ಭೇಟಿ ನೀಡಲು ಕೋರಲಾಗಿದೆ. 

 

click me!