ನೈಋತ್ಯ ರೈಲ್ವೆಯಲ್ಲಿ ನೇಮಕಾತಿ: ಅರ್ಜಿ ಹಾಕಿ, ಯಾವುದೇ ಅರ್ಜಿ ಶುಲ್ಕವಿಲ್ಲ

By Web Desk  |  First Published Oct 22, 2019, 3:17 PM IST

ಭಾರತೀಯ ರೈಲ್ವೆಯ ನೈಋತ್ಯ ವಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಯ ಮಾಹಿತಿ ಈ ಕೆಳಗಿನಂತಿದೆ.


ಬೆಂಗಳೂರು, (ಅ.22):  ಭಾರತೀಯ ರೈಲ್ವೆಯ ನೈಋತ್ಯ ವಲಯದಲ್ಲಿ 386 ಹಿರಿಯ ಕ್ಲರ್ಕ್ ಹುದ್ದೆಗಳಿಗೆ  ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಪೊಲೀಸ್ ನೇಮಕಾತಿ: ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

Latest Videos

ಹಿರಿಯ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ನವೆಂಬರ್ 20, 2019ರೊಳಗೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ  12ನೇ ತರಗತಿ (PUC), ಪದವಿ ಪೂರ್ಣಗೊಳಿಸಿರಬೇಕು. 

ವಯೋಮಿತಿ: 18 ರಿಂದ 42 ವರ್ಷ ವಯಸ್ಸು ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ  18 ರಿಂದ 45 ವರ್ಷ, ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ 18 ರಿಂದ 47 ವರ್ಷ ನಿಗದಿಪಡಿಸಲಾಗಿದೆ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಈ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಹಾಗಾಗಿ ಉಚಿತವಾಗಿ ಅರ್ಜಿ ಹಾಕಬಹುದು. 

ಪ್ರಮುಖ ದಿನಾಂಕ
* ಅರ್ಜಿ ಸಲ್ಲಿಸಲು ಆರಂಭ ದಿನ: 23.10.2019 
* ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ನವೆಂಬರ್ 20, 2019 
ಅರ್ಜಿ ಸಲ್ಲಿಸಲು ಬೇಕಾದ ಇನ್ನಷ್ಟು ವಿವರ ಹಾಗೂ ಅರ್ಜಿ ಸಲ್ಲಿಕೆ ಬಗ್ಗೆ ತಿಳಿಯಲು ಕ್ಲಿಕ್ ಮಾಡಿ

click me!