ಸಿಬ್ಬಂದಿ ನೇಮಕಾತಿ ಆಯೋಗವು 2022ರ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 13, 2022 ಕೊನೆಯ ದಿನವಾಗಿದೆ.
ಬೆಂಗಳೂರು(ಮೇ.12): ಸಿಬ್ಬಂದಿ ನೇಮಕಾತಿ ಆಯೋಗವು (Staff Selection Commission -SSC) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಸೆಲೆಕ್ಷನ್ ಪೋಸ್ಟ್‌ಗಳ 10 ನೇ (Selection Posts Phase 10) ಹಂತದ 1920 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆ ಬಗ್ಗೆ ತಿಳಿದುಕೊಳ್ಳಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 13, 2022 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಭೇಟಿ ನೀಡಲು ಕೋರಲಾಗಿದೆ. ಆಗಸ್ಟ್ ನಲ್ಲಿ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. MTS, ಚಾಲಕ, ವೈಜ್ಞಾನಿಕ ಸಹಾಯಕ, ಅಕೌಂಟೆಂಟ್, ಹೆಡ್ ಕ್ಲರ್ಕ್, ಕನ್ಸರ್ವೇಶನ್ ಅಸಿಸ್ಟೆಂಟ್ ಟೆಕ್ನಿಕಲ್, ಜೂನಿಯರ್ ಕಂಪ್ಯೂಟರ್ ಮೆಟ್ರಿಕ್ಯುಲೇಷನ್ ಮಟ್ಟ, ಹೈಯರ್ ಸೆಕೆಂಡರಿ ಲೆವೆಲ್ ಮತ್ತು ಗ್ರಾಜುಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
NIT KARNATAKA RECRUITMENT 2022: ಸಂಶೋಧನಾ ಅಭ್ಯರ್ಥಿ ಹುದ್ದೆಗಳಿಗೆ ನೇಮಕಾತಿ
ಶೈಕ್ಷಣಿಕ ವಿದ್ಯಾರ್ಹತೆ: ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಖಾಲಿ ಇರುವ ಸೆಲೆಕ್ಷನ್ ಪೋಸ್ಟ್‌ಗಳ 10 ನೇ ಹಂತದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಸಿಬ್ಬಂದಿ ನೇಮಕಾತಿ ಆಯೋಗದ ನಿಯಮಾನುಸಾರ ವಿದ್ಯಾರ್ಹತೆ ಪಡೆದಿರಬೇಕು. 10 ನೆ ತರಗತಿ, ಪಿಯುಸಿ ಮತ್ತು ಪದವಿ ವಿದ್ಯಾರ್ಹತೆ ಮಾಡಿರಬೇಕು.
ಅರ್ಜಿ ಶುಲ್ಕ: ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಖಾಲಿ ಇರುವ ಸೆಲೆಕ್ಷನ್ ಪೋಸ್ಟ್‌ಗಳ 10 ನೇ ಹಂತದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ: ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಖಾಲಿ ಇರುವ ಸೆಲೆಕ್ಷನ್ ಪೋಸ್ಟ್‌ಗಳ 10 ನೇ ಹಂತದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಆನ್‌ಲೈನ್ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿಆಯ್ಕೆಯಾದ ಅಭ್ಯರ್ಥಿಗಳಿಗೆ ಟೈಪಿಂಗ್/ಡೇಟಾ ಎಂಟ್ರಿ/ಕಂಪ್ಯೂಟರ್ ಪ್ರಾವೀಣ್ಯತೆ ಪರೀಕ್ಷೆ ಮುಂತಾದ ಕೌಶಲ್ಯ ಪರೀಕ್ಷೆಗಳನ್ನು ನಡೆಸಿ ಆಯಾಯ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Uttara Kannada Anganwadi Recruitment 2022: ಒಟ್ಟು 76 ಹುದ್ದೆಗಳಿಗೆ ನೇಮಕಾತಿ
ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ: ದೇಶದ ಪ್ರಮುಖ ಸಶಸ್ತ್ರ ಪಡೆಯಾಗಿರುವ ಗಡಿ ಭದ್ರತಾ ಪಡೆ (Border Security Force- BSF) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ (Recruitment ) ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿರುವ ಬಿಎಸ್‌ಎಫ್ ಇನ್ಸ್ಪೆಕ್ಟರ್ (Inspector), ಸಬ್ ಇನ್ಸ್ ಪೆಕ್ಟರ್ (Sub Inspector) ಹೀಗೆ ಒಟ್ಟು 90 ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸುವಂತೆ ಕೋರಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 8 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ https://bsf.gov.in/Home ಗೆ ಭೇಟಿ ನೀಡಿ.
ಒಟ್ಟು 90 ಹುದ್ದೆಗಳ ಮಾಹಿತಿ ಇಂತಿದೆ
ಇನ್ಸ್ಪೆಕ್ಟರ್ : 1 ಹುದ್ದೆ
ಸಬ್ ಇನ್ಸ್ಪೆಕ್ಟರ್: 57 ಹುದ್ದೆಗಳು
ಜೂನಿಯರ್ ಇಂಜಿನಿಯರ್ (Junior Engineer-ಎಲೆಕ್ಟ್ರಿಕಲ್): 32 ಹುದ್ದೆಗಳು
ವೇತನ ವಿವರ: ದೇಶದ ಪ್ರಮುಖ ಸಶಸ್ತ್ರ ಪಡೆಯಾಗಿರುವ ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ದೊರೆಯಲಿದೆ.
ಇನ್ಸ್ಪೆಕ್ಟರ್ ಹುದ್ದೆಗೆ - ₹44900 ರಿಂದ ₹142400
ಸಬ್ ಇನ್ಸ್ಪೆಕ್ಟರ್ ಹುದ್ದೆಗೆ - ₹35400 ರಿಂದ ₹112400
ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್) ಹುದ್ದೆಗೆ - ₹35400 ರಿಂದ ₹112400