'ಕೇಂದ್ರ ಪದೇ ಪದೇ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ'

By Web DeskFirst Published Oct 11, 2019, 12:39 PM IST
Highlights

ಜನಪ್ರತಿನಿಧಿಗಳ ಮೇಲೆ ಉದ್ದೇಶಪೂರ್ವಕವಾಗಿ ಐಟಿ ದಾಳಿ ನಡೆಸುವುದು ಸರಿಯಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ| ದೇಶದಲ್ಲಿ ದ್ವೇಷದ ರಾಜಕಾರಣ ನಡಿಯುತ್ತಿದ್ದು ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ|  ಬೇರೆ ಬೇರೆ ಕಡೆ ಚುನಾವಣೆ ಹಿನ್ನೆಲೆಯಲ್ಲಿ ಐಟಿ ದಾಳಿ ಮಾಡಲಾಗುತ್ತಿದೆ| ಆದಾಯ ತೆರಿಗೆ ಕಟ್ಟಿಲ್ಲ ಅಂದ್ರೆ ನೋಟಿಸ್‌ ಕೊಟ್ಟು ಅವರಿಗೆ ಎಚ್ಚರಿಕೆ ನೀಡಬೇಕು| ಕೇಂದ್ರ ಸರ್ಕಾರ ಪದೇ ಪದೇ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ| 

ಕಲಬುರಗಿ(ಅ.11): ಜನಪ್ರತಿನಿಧಿಗಳ ಮೇಲೆ ಉದ್ದೇಶಪೂರ್ವಕವಾಗಿ ಐಟಿ(ಆದಾಯ ತೆರಿಗೆ ಇಲಾಖೆ) ದಾಳಿ ನಡೆಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿರುವ ಕಾಂಗ್ರೆಸ್‌ ಹಿರಿಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ, ದೇಶದಲ್ಲಿ ದ್ವೇಷದ ರಾಜಕಾರಣ ನಡಿಯುತ್ತಿದ್ದು ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಬೇರೆ ಕಡೆ ಚುನಾವಣೆ ಹಿನ್ನೆಲೆಯಲ್ಲಿ ಐಟಿ ದಾಳಿ ಮಾಡಲಾಗುತ್ತಿದೆ. ಆದಾಯ ತೆರಿಗೆ ಕಟ್ಟಿಲ್ಲ ಅಂದ್ರೆ ನೋಟಿಸ್‌ ಕೊಟ್ಟು ಅವರಿಗೆ ಎಚ್ಚರಿಕೆ ನೀಡಬೇಕು. ಉದ್ದೇಶ ಪೂರ್ವಕವಾಗಿ ದಾಳಿ ನಡೆಸುವುದು ಸರಿಯಲ್ಲ ಎಂದರು. ಕೇಂದ್ರ ಸರ್ಕಾರ ಪದೇ ಪದೇ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಆ ಮೂಲಕ ವಿರೋಧ ಪಕ್ಷಗಳನ್ನು ಹತ್ತಿಕ್ಕಲು ಯತ್ನಿಸುತ್ತಿದೆ. ಇದು ವಿರೋಧ ಪಕ್ಷದ ನಾಯಕರಿಗೆ ಥ್ರೆಟ್‌ ಕಾಲ್‌ ಇದ್ದ ಹಾಗೆ. ಇಂತಹ ರಾಜಕೀಯ ಪ್ರೇರಿತ ದಾಳಿಗಳನ್ನು ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿದ್ದಾರೆ.
 

click me!