
ಕಲಬುರಗಿ (ಏ.20): ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಏಪ್ರಿಲ್ 21 ರಂದು ಕಲಬುರಗಿಗೆ ( kalaburagi ) ಆಗಮಿಸಲಿದ್ದಾರೆ. ಏಪ್ರಿಲ್ 21 ಮತ್ತು ಏಪ್ರಿಲ್ 22 ರಂದು ಎರಡು ದಿನ ಬೊಮ್ಮಾಯಿ ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರಲಿದ್ದಾರೆ.
ಸಿಎಂ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ಗುರುಕರ್ ಅವರು, ಇಂದು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಸಿಎಂ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರಬೇಕು. ಯಾರೂ ರಜೆ ಮೇಲೆ ಹೋಗುವಂತಿಲ್ಲ ಎಂದು ಜಿಲ್ಲಾಧಿಕಾರಿ ಯಶವಂತ ಗುರುಕರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೈತಿಕ ಶಿಕ್ಷಣ ಪಠ್ಯಕ್ರಮದಲ್ಲಿ ಕುರಾನ್ ಸೇರ್ಪಡೆ BC NAGESH
ಮುಖ್ಯಮಂತ್ರಿಗಳು ಏಪ್ರಿಲ್ 21 ರಂದು ಬಳ್ಳಾರಿ (Bellary ) ಜಿಂದಾಲ್ ಏರ್ ಸ್ಟ್ರಿಪ್ ನಿಂದ ಹೆಲಿಕಾಪ್ಟರ್ ಮೂಲಕ ಕಲಬುರಗಿ ಡಿ.ಎ.ಆರ್. ಗ್ರೌಂಡ್ ಗೆ ಮಧ್ಯಾಹ್ನ 2.15 ಗಂಟೆಗೆ ಅಗಮಿಸುವರು. ಬಿಜೆಪಿ ವಿಭಾಗೀಯ ಸಮಾವೇಶದಲ್ಲಿ ಪಾಲ್ಗೊಂಡು ಕಲಬುರಗಿಯಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಏಪ್ರಿಲ್ 22 ರಂದು ಬೆಳಿಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿ ನಡೆಸುವರು. 10.30 ಗಂಟೆಗೆ ಡಿ.ಸಿ. ಕಚೇರಿ ಅವರಣದಲ್ಲಿ ಆಯೋಜಿಸಿರುವ ಸ್ಕಿಲ್ ಆನ್ ವೀಲ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 2 ಗಂಟೆಗೆ ಕಲಬುರಗಿಯಿಂದ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆ ಜಿಲ್ಲೆಗೆ ತೆರಳಲಿದ್ದಾರೆ.
ಮುಖ್ಯಮಂತ್ರಿಗಳು ಅಲ್ಲದೆ ರಾಜ್ಯ ಸಚಿವ ಸಂಪುಟದ ಸಚಿವರು, ಕೇಂದ್ರದ ಸಚಿವರು ಸಹ ಆಗಮಿಸಲಿರುವ ಹಿನ್ನೆಲೆಯಲ್ಲಿ ನಿಯಮದಂತೆ ಶಿಷ್ಟಾಚಾರ ಪಾಲಿಸಬೇಕು. ಸಚಿವರಿಗೆ ನೇಮಿಸಲಾದ ಲೈಸನ್ ಅಧಿಕಾರಿಗಳು ಎಲ್ಲಾ ಶಿಷ್ಟಾಚಾರ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದರು.
ಸಚಿವರು, ಮುಖ್ಯಮಂತ್ರಿಗಳು ಜಿಲ್ಲಾ ಪ್ರವಾಸದಲ್ಲಿರುವುದರಿಂದ ಆಯಾ ಇಲಾಖೆಗಳಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಕೇಳಿದಲ್ಲಿ ತಕ್ಷಣ ಒದಗಿಸಲು ಅಧಿಕಾರಿಗಳು ಸಿದ್ಧರಿರಬೇಕು ಎಂದು ಸೂಚಿಸಿದರು.
ದಾವಣಗೆರೆ ಬಿಜೆಪಿ ವಿಭಾಗೀಯ ಸಮಾವೇಶದಲ್ಲಿ ಕೈ ವಿರುದ್ಧ ಯಡಿಯೂರಪ್ಪ ಗುಡುಗು
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ದಿಲೀಷ್ ಸಾಸಿ, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಡಾ. ಶಂಕರ ವಣಿಕ್ಯಾಳ, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಹೆಚ್ಚುವರಿ ಎಸ್.ಪಿ. ಪ್ರಸನ್ನ ದೇಸಾಯಿ, ಸಹಾಯಕ ಅಯುಕ್ತೆ ಮೋನಾ ರೋಟ್ ಸೇರಿದಂತೆ ಜಿಲ್ಲಾ ಮಟ್ಟದ ಇತರೆ ಅಧಿಕಾರಿಗಳು ಇದ್ದರು.