
ಕಲಬುರಗಿ[ಅ.25]: ನಗರದ ಚಲನಚಿತ್ರ ಮಂದಿರಗಳಲ್ಲಿ ನ.1 ರಿಂದ ಒಂದು ತಿಂಗಳ ಕಾಲ ಕಡ್ಡಾಯವಾಗಿ ಕನ್ನಡ ಚಲನಚಿತ್ರ ಪ್ರದರ್ಶಿಸಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಆನಂದ ಕಪನೂರ ಅವರು ಆಗ್ರಹಿಸಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಅಂದು ನಗರದ ಮಲ್ಟಿಫ್ಲೆಕ್ಸ್‌ಗಳಲ್ಲಿ ಕಡ್ಡಾಯವಾಗಿ ಕನ್ನಡ ಚಲನಚಿತ್ರ ಪ್ರದರ್ಶನ ಮಾಡುವ ಮೂಲಕ ಕನ್ನಡ ಸಿನಿಮಾಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಕನ್ನಡ ಸಿನೆಮಾಗಳ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳುತ್ತಿರುವ ಸಿನಿಮಾ ಮಂದಿರ ಮಾಲೀಕರು ನವೆಂಬರ್ 1 ರಿಂದ ಒಂದು ತಿಂಗಳ ಕಾಲ ಎಲ್ಲ ಆಟಗಳು ಕನ್ನಡ ಚಲನಚಿತ್ರ ಪ್ರದರ್ಶನ ಮಾಡಿ ಕನ್ನಡ ಅಭಿಮಾನವನ್ನುಎತ್ತಿ ಹಿಡಿಯಬೇಕು. ಒಂದು ವೇಳೆ ಅಂದು ಕನ್ನಡ ಸಿನಿಮಾ ಪ್ರದರ್ಶನ ಮಾಡದಿದ್ದಲ್ಲಿ ಅಂತಹ ಸಿನಿಮಾ ಮಂದಿರಗಳ ಎದುರು ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದ್ದಾರೆ.