ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಜೀವನಗಿ ಗ್ರಾಮದ ಬಳಿ ಘಟನೆ ನಡೆದಿದ್ದು, ಕಾರಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭಿರ ಗಾಯಗಳಾಗಿದೆ.
ಕಲಬುರಗಿ(ಅ.31): ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಜೀವನಗಿ ಗ್ರಾಮದ ಬಳಿ ಘಟನೆ ನಡೆದಿದ್ದು, ಕಾರಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭಿರ ಗಾಯಗಳಾಗಿದೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೇಡಕುಂದಾ ಗ್ರಾಮದ ಪ್ರಿಯಾಂಕಾ(20)ಕಮಲಾಬಾತಿ(55)ಮೃತ ದುರ್ದೈವಿಗಳು. ಗಾಯಾಳುಗಳನ್ನ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
undefined
ನಡೆದಿದ್ದೇನು..?
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೇಡಕುಂದಾ ಗ್ರಾಮದ ಪ್ರಿಯಾಂಕಾ, ಕಮಲಾಬಾತಿ ಹಾಗೂ ಕುಟುಂಬಸ್ಥರು ಬೀದರ್ ನಿಂದ ರಟಕಲ್ ರೇವಣಶಿದ್ದೇಶ್ವರ ದೇವಸ್ಥಾನಕ್ಕೆ ಹೊರಟಿದ್ದರು. ಕಮಲಾಪುರ ತಾಲ್ಲೂಕಿನ ಜೀವನಗಿ ಗ್ರಾಮದ ಬಳಿ ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿಯಾಗಿದೆ. ಇಬ್ಬರು ಅಪಘಾತ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಇನ್ನುಳಿದವರಿಗೆ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.