ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಪ್ರಧಾನಿ ಭೇಟಿಯಾಗಿ ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ| ಇದು ಮಧ್ಯಂತರ ಪರಿಹಾರವಷ್ಟೆ, ಹೆಚ್ಚಿನ ಪರಿಹಾರ ಬರುತ್ತೆ, ಕಾಯಬೇಕಷ್ಟೆ ಎಂದ ಡಿಸಿಎಂ ಗೋವಿಂದ ಕಾರಜೋಳ| ರಾಜ್ಯ ಸರಕಾರ ನಿರ್ಲಕ್ಷ ಮಾಡಿಲ್ಲ| ಪ್ರವಾಹಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಬಿಹಾರಕ್ಕೆ ಮಾತ್ರ ಕೇಂದ್ರ ಸರಕಾರ ಮಧ್ಯಂತರ ಪರಿಹಾರ ಬಿಡುಗಡೆ| ಆಶಾವಾದಿಗಳಾಗಿರಬೇಕು ಹೊರತು ನಿರಾಶವಾದಿಗಳಾಗಿರಬಾರದು|
ಕಲಬುರಗಿ(ಅ.17): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಇದು ಮಧ್ಯಂತರ ಪರಿಹಾರವಷ್ಟೆ, ಹೆಚ್ಚಿನ ಪರಿಹಾರ ಬರುತ್ತೆ, ಕಾಯಬೇಕಷ್ಟೆ ಎಂದು ಡಿಸಿಎಂ ಗೋವಿಂದ ಕಾರಜೋಳ ಅವರು ಹೇಳಿದ್ದಾರೆ.
ಗುರುವಾರ ನಗರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ತರ ಬಗ್ಗೆ ರಾಜ್ಯ ಸರಕಾರ ನಿರ್ಲಕ್ಷ ಮಾಡಿಲ್ಲ, ಪ್ರವಾಹಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಬಿಹಾರಕ್ಕೆ ಮಾತ್ರ ಕೇಂದ್ರ ಸರಕಾರ ಮಧ್ಯಂತರ ಪರಿಹಾರ ಬಿಡುಗಡೆ ಮಾಡಲಾಗಿದೆ. ಆಶಾವಾದಿಗಳಾಗಿರಬೇಕು ಹೊರತು ನಿರಾಶವಾದಿಗಳಾಗಿರಬಾರದು. ರಾಜ್ಯದ ನೀರಾವರಿ ಸಮಸ್ಯೆಗಳನ್ನ ಶೀಘ್ರವೇ ಇತ್ಯರ್ಥಕ್ಕೆ ಕೂಡ ಕೇಂದ್ರದ ಬೇಡಿಕೆ ಇಡಲಾಗಿದೆ ಎಂದು ಹೇಳಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಬಿಜೆಪಿ ಕಚೇರಿಯಲ್ಲಿ ಸಿಎಂ ಯಡಿಯೂರಪ್ಪ ಅವರ ಬೆಂಬಲಿಗರನ್ನ ಹೊರಹಾಕಿರುವುದು ಸುಳ್ಳು ಸುದ್ದಿಯಾಗಿದೆ. ಯಾರೊ ಒಬ್ಬನನ್ನ ಹೊರ ಹಾಕಿರುವುದಕ್ಕೆ ಈ ಬಣ್ಣ ಕಟ್ಟೊದು ಸರಿಯಲ್ಲ ಎಂದು ತಿಳಿಸಿದ್ದಾರೆ.
ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರ ಬಿಟ್ಟು ಚುನಾವಣೆಯಲ್ಲಿ ಸಿಎಂ ಬ್ಯುಸಿ ಇದಾರೆಂಬ ಮಾಜಿ ಸಿಎಂಸಿದ್ದರಾಮಯ್ಯ ಅವರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಸಿದ್ದರಾಮಯ್ಯಗೆ ರಾಜಕಾರಣ ಮಾಡೋದು ಬಿಟ್ಟು ಬೇರೆನೂ ಗೊತ್ತಿಲ್ಲ. ಅವರು ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಾಗೆ ಹೇಳಬೇಕು ತಾನೆ? ಅವರು ಇನ್ನೇನು ಹೇಳಲು ಸಾಧ್ಯ? ಅವರ ಮಾತು ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.
ಕಲಬುರಗಿಯಲ್ಲೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲಿ ನಡೆಯಲಿದೆ. ಡಿಸೆಂಬರ್ ಅಥವ 2020 ರ ಜನೆವರಿ ತಿಂಗಳಲ್ಲಿ ಸಮ್ಮೇಳನ ನಡೆಸುವ ಬಗ್ಗೆ ಮಾತುಕತೆ ನಡೆದಿದೆ. ಉಪಚುನಾವಣೆ ಘೋಷಣೆ ಹಿನ್ನಲೆಯಲ್ಲಿ ಸಮ್ಮೇಳನ ವಿಳಂಬವಾಗುತ್ತಿದೆ, ಸಮ್ಮೇಳನವನ್ನು ಅಚ್ಚುಕಟ್ಟಾಗಿ ನಡೆಸಲು ಮೂಂದುಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮಾಧ್ಯಮಗಳನ್ನು ದೂರ ಇಡುವ ಪ್ರಶ್ನೆಯಿಲ್ಲ
ಇನ್ನು ವಿಧಾನಸಭೆ ಕಲಾಪದಿಂದ ಮಾಧ್ಯಮಗಳನ್ನು ಹೊರಗಿಟ್ಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವಿಧಾನಸಭೆಯಲ್ಲಿ ವಿಧಾನ ಸಭಾಧ್ಯಕ್ಷರಿಗೆ ಪರಮಾಧಿಕಾರ ಇದೆ. ಸಭಾಧ್ಯಕ್ಷರ ನಿಲುವು ಪ್ರಶ್ನೆ ಮಾಡುವ ಅಧಿಕಾರ ನಮಗಿಲ್ಲ. ಕೆಲವು ರಾಜ್ಯಗಳಲ್ಲಿ ಮತ್ತು ಲೋಕಸಭೆಯಲ್ಲಿ ಜಾರಿ ಇರುವ ನಿಯಮದಂತೆ ಒಂದೇ ಚಾನಲ್ ವ್ಯವಸ್ಥೆ ಮಾಡಿರಬಹುದು. ಮಾಧ್ಯಮಗಳನ್ನು ದೂರ ಇಡುವ ಪ್ರಶ್ನೆಯಿಲ್ಲ. ವಾಲ್ಮಿಕಿ ಜಯಂತಿಯಲ್ಲಿ ಮಾಧ್ಯಮಗಳನ್ನು ಹೊರಗಿಟ್ಟಿಲ್ಲ, ಮಾಧ್ಯಮಗಳೇ ನನ್ನ ಸುದ್ದಿಗೋಷ್ಠಿ ಭಹಿಷ್ಕರಿಸಿದ್ದಾರೆ ಎಂದು ಹೇಳಿದ್ದಾರೆ.