HDK ಸಮ್ಮುಖದಲ್ಲಿ ಬೆಂಬಲ ಘೋಷಿಸಿದ ಪರಂ,ಸಿದ್ದು

First Published May 15, 2018, 7:47 PM IST
Highlights

ಅಖಿಲ ಭಾರತ ಕಾಂಗ್ರೆಸ್ ಪಕ್ಷ, ರಾಜ್ಯದ ಹಿರಿಯ ಮುಖಂಡರು ಸೇರಿದಂತೆ  ಜೆಡಿಎಸ್ ಪಕ್ಷಕ್ಕೆ ಸರ್ಕಾರ ರಚಿಸಲು ತೀರ್ಮಾನಿಸಿದೆ. ಬೆಂಬಲ ಪತ್ರವನ್ನು ಜೆಡಿಎಸ್ ವರಿಷ್ಠ ದೇವೇಗೌಡರಿಗೆ ನೀಡಿದ್ದು ಅವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು(ಮೇ.15):  ಎಐಸಿಸಿ ಹಿರಿಯ ನಾಯಕರ ತೀರ್ಮಾನದಂತೆ  ಸರ್ಕಾರ ರಚಿಸಲು ಜೆಡಿಎಸ್'ಗೆ ಬೇಷರತ್ ಬೆಂಬಲ ನೀಡಿರುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಪರಮೇಶ್ವರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿದ ನಂತರ  ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷ ಕುಮಾರಸ್ವಾಮಿ ಸಮ್ಮುಖದಲ್ಲಿ ಉಭಯ ಪಕ್ಷದ ನಾಯಕರು ಮಾತನಾಡಿದರು.
ಸರ್ಕಾರ ರಚಿಸಲು ಎರಡೂ ಪಕ್ಷಗಳ ಬೆಂಬಲ ಪತ್ರದೊಂದಿಗೆ  ರಾಜ್ಯಪಾಲರಿಗೆ ಸರ್ಕಾರ ರಚಿಸಲು ಮನವಿ ಮಾಡಿದ್ದು, ಅನುಮತಿ ದೊರೆತ ನಂತರ ಮುಂದಿನ ಪ್ರಕ್ರಿಯೆಗಳು ಮುಂದುವರಿಯುತ್ತವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್  ಹೇಳಿದರು

"
ಎಐಸಿಸಿ ತೀರ್ಮಾನ : ಸಿದ್ದು
ಅಖಿಲ ಭಾರತ ಕಾಂಗ್ರೆಸ್ ಪಕ್ಷ, ರಾಜ್ಯದ ಹಿರಿಯ ಮುಖಂಡರು ಸೇರಿದಂತೆ  ಜೆಡಿಎಸ್ ಪಕ್ಷಕ್ಕೆ ಸರ್ಕಾರ ರಚಿಸಲು ತೀರ್ಮಾನಿಸಿದೆ. ಬೆಂಬಲ ಪತ್ರವನ್ನು ಜೆಡಿಎಸ್ ವರಿಷ್ಠ ದೇವೇಗೌಡರಿಗೆ ನೀಡಿದ್ದು ಅವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯಪಾಲರು ಒಪ್ಪಿಗೆ ನೀಡಿದ ನಂತರ ಮುಂದಿನ ಬೆಳವಣಿಗೆಗಳು ಮುಂದುವರಿಯಲಿವೆ ಎಂದು ಕುಮಾರಸ್ವಾಮಿ ಕೂಡ ತಿಳಿಸಿದರು.

"

click me!