ಬಿಎಸ್‌ವೈ ಪ್ರಮಾಣ ವಚನ : ರಾಜಭವನದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್

Published : May 17, 2018, 08:09 AM IST
ಬಿಎಸ್‌ವೈ ಪ್ರಮಾಣ ವಚನ : ರಾಜಭವನದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್

ಸಾರಾಂಶ

ರಾಜಭವನದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ರಾಜಭವನದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ. 

ಬೆಂಗಳೂರು (ಮೇ 17 ): ಮುಖ್ಯಮಂತ್ರಿಯಾಗಿ  ಬಿಎಸ್ ವೈ ಪ್ರಮಾಣ ವಚನ ಸ್ವೀಕಾರ ಮಾಡುವ ಹಿನ್ನೆಲೆಯಲ್ಲಿ , ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿವೆ. ರಾಜಭವನದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ. 

ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ರಾಜಭವನದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ. ನೂತನ ಸಿಎಂ ಆಗಿ ಯಡಿಯೂರಪ್ಪ ಪ್ರಮಾಣ ವಚನ ಹಿನ್ನೆಲೆಯಲ್ಲಿ , ರಾಜಭವನದ ಸುತ್ತ ಮುತ್ತ ಪೊಲೀಸರಿಂದ ಭಾರೀ ಭದ್ರತೆ ಕೈಗೊಳ್ಳಲಾಗಿದೆ. 1500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.  

ಅಲ್ಲದೇ ಯಡಿಯೂರಪ್ಪ ಪ್ರಮಾಣ ವಚನಕ್ಕೆ ವಿಪಕ್ಷಗಳಿಂದ ವಿರೋಧ ಇರುವ ಹಿನ್ನೆಲೆಯಲ್ಲಿ  ಪ್ರತಿಭಟನಾಕಾರರ ಮೇಲೆಯೂ ಕೂಡ ನಿಗಾ ವಹಿಸಲಾಗಿದೆ.  ಪ್ರತಿಭಟನಾಕಾರರನ್ನ ನಿಯಂತ್ರಿಸಲು ನಗರದಾದ್ಯಂತ 6 ಸಾವಿರ  ಸಿಬ್ಬಂದಿ ನೇಮಕ ಮಾಡಲಾಗಿದೆ. 

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ